ಹಮಾಸ್ ಭಯೋತ್ಪಾದಕರು ಇಸ್ರೇಲ್ ಮೇಲೆ ದಾಳಿಯನ್ನು ನಡೆಸಿದ್ದು, ಇದೀಗ ಇಸ್ರೇಲ್ ಮತ್ತು ಪ್ಯಾಲೆಸ್ತೇನ್ ನಡುವೆ ಯುದ್ಧ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಭಾರತವು ಇಸ್ರೇಲ್‌ನಲ್ಲಿರುವ ತನ್ನ ಪ್ರಜೆಗಳಿಗೆ ಸಲಹೆಯನ್ನು ನೀಡಿದೆ. ಜಾಗರೂಕರಾಗಿರಲು ಮತ್ತು ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಗಮನಿಸುವಂತೆ ಕೇಳಿಕೊಂಡಿದೆ. ಈ ಬಗ್ಗೆ ಇಸ್ರೇಲ್‌ನಲ್ಲಿರುವ ಭಾರತದ ರಾಯಭಾರ ಕಚೇರಿ ಸಂದೇಶವನ್ನು ರವಾನೆ ಮಾಡಿದೆ.
ಇಸ್ರೇಲ್ನ ಸದ್ಯದ ಪರಿಸ್ಥಿತಿಯಲ್ಲಿ ಮನದಲ್ಲಿಟ್ಟುಕೊಂಡು, ಇಸ್ರೇಲ್‌ನಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು ಜಾಗರೂಕರಾಗಿರಲು ಮತ್ತು ಸ್ಥಳೀಯ ಅಧಿಕಾರಿಗಳ ಸಲಹೆಯಂತೆ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಪಾಲಿಸಬೇಕು. ದಯವಿಟ್ಟು ಜಾಗರೂಕರಾಗಿರಿ, ಅನಗತ್ಯ ಓಡಾಟಗಳನ್ನು ತಪ್ಪಿಸಿ ಮತ್ತು ಸುರಕ್ಷವಾಗಿರಿ.
ಯಾವುದೇ ಹೆಚ್ಚಿನ ಮಾರ್ಗದರ್ಶನಕ್ಕೆ ರಾಯಭಾರ ಕಚೇರಿಯನ್ನು ಸಂಪರ್ಕಿಸಿ ಎಂದು ಸಂದೇಶವನ್ನು ನೀಡಿದೆ.