ಕ್ರೀಡಾ ಸುದ್ದಿ

ವಿಶ್ವಕಪ್ 2023: ಆರಂಭಿಕ ಪಂದ್ಯದಲ್ಲೇ ವಿಶ್ವದಾಖಲೆ ಬರೆದ ದಕ್ಷಿಣ ಆಫ್ರಿಕಾ ತಂಡ

ನವದೆಹಲಿ: ಭಾರತದ ಆತಿಥ್ಯದಲ್ಲಿ ವಿಶ್ವಕಪ್‌ ಟೂರ್ನಿ ಶುರುವಾಗಿದ್ದು, ದಕ್ಷಿಣ ಆಫ್ರಿಕಾ ತಂಡ ತನ್ನ ಆರಂಭಿಕ ಪಂದ್ಯದಲ್ಲೇ ವಿಶ್ವದಾಖಲೆ ಬರೆದಿದೆ.

Advertisement
Advertisement
Advertisement

ಶನಿವಾರ ನವದೆಹಲಿಯ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡುವ ಅವಕಾಶ ಪಡೆದ ದಕ್ಷಿಣ ಆಫ್ರಿಕಾ ತಂಡ 50 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 428 ರನ್‌ ಬಾರಿಸಿದೆ. ಈ ಪೈಕಿ ಮೂವರು ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಶತಕ ಸಿಡಿಸಿರುವುದು ವಿಶೇಷ. ಅಲ್ಲದೇ ಇದು ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ದಾಖಲಾದ ಗರಿಷ್ಠ ಸ್ಕೋರ್‌ ಸಹ ಆಗಿದೆ.

2015ರ ವಿಶ್ವಕಪ್‌ ಟೂರ್ನಿಯಲ್ಲಿ ಅಫ್ಘಾನಿಸ್ತಾನ ತಂಡದ ವಿರುದ್ಧ ಆಸ್ಟ್ರೇಲಿಯಾ 6 ವಿಕೆಟ್‌ ನಷ್ಟಕ್ಕೆ 417 ರನ್‌ ಸಿಡಿಸಿದ್ದು, ಈವರೆಗಿನ ದಾಖಲೆಯಾಗಿತ್ತು. ಇದೀಗ ದಕ್ಷಿಣ ಆಫ್ರಿಕಾ ತಂಡ 428 ರನ್‌ ಸಿಡಿಸಿ ವಿಶ್ವದಾಖಲೆ ನಿರ್ಮಿಸಿದೆ.

ಆರಂಭಿಕರಾಗಿ ಕಣಕ್ಕಿಳಿದ ಕ್ವಿಂಟನ್‌ ಡಿಕಾಕ್‌ ಹಾಗೂ ತೆಂಬಾ ಬಹುಮಾ ಉತ್ತಮ ಜೊತೆಯಾಟ ನೀಡುವಲ್ಲಿ ವಿಫಲರಾದರು. ಆದ್ರೆ 2ನೇ ವಿಕೆಟಿಗೆ ಜೊತೆಯಾದ ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್ ಹಾಗೂ ಡಿಕಾಕ್‌ ಜೋಡಿ 174 ಎಸೆತಗಳಲ್ಲಿ 204 ರನ್‌ ಸಿಡಿಸಿತ್ತು. ಡಿಕಾಕ್‌ 84 ಎಸೆತಗಳಲ್ಲಿ 100 ರನ್‌ (3 ಸಿಕ್ಸರ್‌, 8 ಬೌಂಡರಿ) ಚಚ್ಚಿದರೆ, ಡುಸ್ಸೆನ್‌ 110 ಎಸೆತಗಳಲ್ಲಿ 108 ರನ್‌ (2 ಸಿಕ್ಸರ್‌, 13 ಬೌಂಡರಿ) ಬಾರಿಸಿದರು. ಇನ್ನೂ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ಏಡನ್‌ ಮಾರ್ಕ್ರಮ್‌ ಸ್ಫೋಟಕ ಬ್ಯಾಟಿಂಗ್‌ ನಡೆಸಿ ಲಂಕಾ ಬೌಲರ್‌ಗಳನ್ನ ಬೆಂಡೆತ್ತಿದರು. 196.29 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಮಾರ್ಕ್ರಮ್‌ 49 ಎಸೆತಗಳಲ್ಲೇ 14 ಬೌಂಡರಿ, 3 ಭರ್ಜರಿ ಸಿಕ್ಸರ್‌ಗಳೊಂದಿಗೆ ಶತಕ ಸಿಡಿಸಿ ಮೆರೆದಾಡಿದರು. ಒಟ್ಟು 54 ಎಸೆತಗಳಲ್ಲಿ 106 ರನ್‌ ಚಚ್ಚಿ ವಿಕೆಟ್‌ ಒಪ್ಪಿಸಿದರು.

ಈ ಬೆನ್ನಲ್ಲೇ ಹೆನ್‌ರಿಚ್‌ ಕ್ಲಾಸೆನ್‌ 32 ರನ್‌, ಡೇವಿಡ್‌ ಮಿಲ್ಲರ್‌ 21 ಎಸೆತಗಳಲ್ಲಿ ಅಜೇಯ 39 ರನ್‌ ಹಾಗೂ ಮಾರ್ಕೊ ಜಾನ್ಸೆನ್‌ ಅಜೇಯ 12 ರನ್‌ಗಳ ಕೊಡುಗೆ ನೀಡುವ ಮೂಲಕ ತಂಡದ ಮೊತ್ತ 400ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು. ಅಂತಿಮವಾಗಿ ದಕ್ಷಿಣ ಆಫ್ರಿಕಾ 50 ಓವರ್‌ಗಳಲ್ಲಿ 428 ರನ್‌ ಬಾರಿಸಿತು. ಶ್ರೀಲಂಕಾ ಪರ ದಿಲ್ಶನ್ ಮಧುಶಂಕ 2 ವಿಕೆಟ್‌ ಕಿತ್ತರೆ, ಕಸುನ್ ರಜಿತಾ, ಮತೀಶ ಪಥಿರಣ, ದುನಿತ್ ವೆಲ್ಲಲಾಗೆ ತಲಾ ಒಂದೊಂದು ವಿಕೆಟ್‌ ಪಡೆದರು.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago