ಕ್ರೀಡಾ ಸುದ್ದಿ

ಏಷ್ಯನ್ ಗೇಮ್ಸ್‌ನ ಪುರುಷರ ಡಬಲ್ಸ್ ಬ್ಯಾಡ್ಮಿಂಟನ್ ನಲ್ಲಿ ಭಾರತಕ್ಕೆ ಚಿನ್ನದ ಪದಕ

ಹ್ಯಾಂಗ್‌ಝೌ: ಈ ಹಿಂದೆ ಇಂಡೋನೇಷ್ಯಾ ಮತ್ತು ಕೊರಿಯಾ ಓಪನ್ಸ್‌ ಟೂರ್ನಿಯಲ್ಲಿ ಐತಿಹಾಸಿಕ ಪ್ರಶಸ್ತಿ ಗೆದ್ದಿದ್ದ ಭಾರತದ ಸಾತ್ವಿಕ್‌ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿ ಏಷ್ಯನ್ ಗೇಮ್ಸ್‌ನ ಪುರುಷರ ಡಬಲ್ಸ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲೂ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದೆ.

Advertisement
Advertisement
Advertisement

ಶನಿವಾರ ಭಾರತದ ಜೋಡಿ ದಕ್ಷಿಣ ಕೊರಿಯಾದ ಚೋಯ್ ಸೊಲ್ಗು ಮತ್ತು ಕಿಮ್ ವೊನ್ಹೋ ಅವರನ್ನು 21-18, 21-16 ಅಂತರದ ನೇರ ಗೇಮ್‌ಗಳಿಂದ ಸೋಲಿಸುವ ಮೂಲಕ ಚೊಚ್ಚಲ ಚಿನ್ನದ ಪದಕ ಗೆದ್ದು ದಾಖಲೆ ಬರೆದಿದೆ. ಇದಕ್ಕೂ ಮುನ್ನ ಸೆಮಿಫೈನಲ್‌ನಲ್ಲಿ ಮಲೇಷ್ಯಾದ ಆರೋನ್ ಚಿಯಾ ಮತ್ತು ಸೊಹ್ ವುಯಿ ಯಿಕ್ ವಿರುದ್ಧ 21-17, 21-12 ಅಂತರದಲ್ಲಿ ಈ ಜೋಡಿ ಜಯ ಸಾಧಿಸಿತ್ತು.

ಈಗಾಗಲೇ ಒಟ್ಟು 382 ಪದಕಗಳನ್ನು (200 ಚಿನ್ನ, 111 ಬೆಳ್ಳಿ, 71 ಕಂಚು) ಗೆದ್ದಿರುವ ಚೀನಾ ಆರಂಭದಿಂದಲೂ ಮೊದಲ ಸ್ಥಾನದಲ್ಲೇ ಮುಂದುವರಿದಿದೆ. 186 ಪದಕಗಳನ್ನು (51 ಚಿನ್ನ, 66 ಬೆಳ್ಳಿ, 69 ಕಂಚು) ಗೆದ್ದಿರುವ ಜಪಾನ್‌ 2ನೇ ಸ್ಥಾನದಲ್ಲಿದೆ. ದಕ್ಷಿಣ ಕೊರಿಯಾ 190 ಪದಕಗಳನ್ನ (42 ಚಿನ್ನ, 59 ಬೆಳ್ಳಿ, 89 ಕಂಚು) ಗೆದ್ದು 3ನೇ ಸ್ಥಾನದಲ್ಲಿದೆ. ಆದ್ರೆ ಈವರೆಗೆ 28 ಚಿನ್ನ, 38 ಬೆಳ್ಳಿ ಹಾಗೂ 41 ಕಂಚು ಸೇರಿದಂತೆ ಒಟ್ಟು 107 ಪದಕಗಳನ್ನ ಬಾಚಿಕೊಂಡಿರುವ ಭಾರತ 4ನೇ ಸ್ಥಾನ ಭದ್ರಪಡಿಸಿಕೊಂಡಿದೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago