ಚಂಡೀಗಢ: ಮನೆಯೊಂದರಲ್ಲಿ ಫ್ರಿಡ್ಜ್‌ನ ಕಂಪ್ರೆಸರ್ ಸ್ಫೋಟಗೊಂಡು ಮೂವರು ಮಕ್ಕಳು ಸೇರಿಂತೆ ಒಂದೇ ಕುಟುಂಬದ ಒಟ್ಟು ಐವರು ಸಾವನ್ನಪ್ಪಿರುವ ಆಘಾತಕಾರಿ ಘಟನೆ ಪಂಜಾಬ್‌ನ ಜಲಂಧರ್‌ನಲ್ಲಿ ನಡೆದಿರುವುದಾಗಿ ಸೋಮವಾರ ಪೊಲೀಸರು ತಿಳಿಸಿದ್ದಾರೆ.
ದುರ್ಘಟನೆ ಭಾನುವಾರ ರಾತ್ರಿ ನಡೆದಿದ್ದು, ಸ್ಫೋಟದಿಂದಾಗಿ ಇಡೀ ಮನೆಗೆ ಬೆಂಕಿ ಹೊತ್ತಿಕೊಂಡಿದೆ. ಮೃತರನ್ನು ಯಶಪಾಲ್ ಘಾಯ್ (70), ರುಚಿ ಘಾಯ್ (40), ಮನ್ಶಾ (14), ದಿಯಾ (12) ಮತ್ತು ಅಕ್ಷಯ್ (10) ಎಂದು ಗುರುತಿಸಲಾಗಿದೆ.
ಸ್ಫೋಟಕ್ಕೆ ನಿಖರವಾದ ಕಾರಣ ಕಂಡುಹಿಡಿಯಲು ಮಾದರಿಗಳನ್ನು ಸಂಗ್ರಹಿಸಲು ವಿಧಿವಿಜ್ಞಾನ ತಜ್ಞರ ತಂಡವನ್ನು ಸ್ಥಳಕ್ಕೆ ಕರೆಯಲಾಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.