ರಾಜ್ಯಾದ್ಯಂತ ಇರುವ ಪಟಾಕಿ ಗೋದಾಮುಗಳ ಸಮೀಕ್ಷೆ ನಡೆಸಿ, ಸುರಕ್ಷತೆ ಬಗ್ಗೆ ಪರಿಶೀಲನೆ : ಡಿಕೆಶಿ

0
96

ಬೆಂಗಳೂರು : ಅತ್ತಿಬೆಲೆ ಪಟಾಕಿ ದುರಂತದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇರುವ ಪಟಾಕಿ ಗೋದಾಮುಗಳ ಸಮೀಕ್ಷೆ ನಡೆಸಿ, ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಭವಿಷ್ಯದಲ್ಲಿ ಇಂತಹ ದುರಂತಗಳು ನಡೆಯದಂತೆ ಸೂಕ್ತ ನೀತಿ ರೂಪಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಹಾವೇರಿ ಪಟಾಕಿ ಗೋದಾಮು ಸ್ಫೋಟ ಸೇರಿ 2 ತಿಂಗಳ ಅಂತರದಲ್ಲಿ ರಾಜ್ಯದಲ್ಲಿ 2 ಪಟಾಕಿ ದುರಂತ ಸಂಭವಿಸಿದ ಬೆನ್ನಲ್ಲೇ ಅವರು ಈ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್‌ ಅವರು, ‘ಇನ್ನು ಮುಂದೆ ಇಂತಹ ಘಟನೆ ಸಂಭವಿಸದಂತೆ ಎಚ್ಚರ ವಹಿಸಲಾಗುವುದು. ರಾಜ್ಯದಲ್ಲಿ ಇರುವ ಪಟಾಕಿ ಗೋದಾಮುಗಳಿಗೆ ಪೊಲೀಸ್ ಇಲಾಖೆ, ಜಿಲ್ಲಾಧಿಕಾರಿಗಳು ನೋಟಿಸ್ ನೀಡಿ ಸುರಕ್ಷತೆ ಪರಿಶೀಲನೆ ಮಾಡಲು ಸೂಚನೆ ನೀಡಲಾಗಿದೆ. ಜತೆಗೆ ರಾಜ್ಯಾದ್ಯಂತ ಇರುವ ಪಟಾಕಿ ಗೋದಾಮುಗಳ ಸಮೀಕ್ಷೆ ನಡೆಸಲಾಗುತ್ತದೆ’ ಎಂದು ಹೇಳಿದರು.

ಭವಿಷ್ಯದಲ್ಲಿ ಪಟಾಕಿ ದುರಂತಗಳು ನಡೆಯದಂತೆ ನೀತಿ ನಿರೂಪಣೆ ಮಾಡಲಾಗುವುದು’ ಎಂದು ಹೇಳಿದರು.

ತಮಿಳುನಾಡು ಹಾಗೂ ಕರ್ನಾಟಕ ಎರಡೂ ರಾಜ್ಯಗಳು ಒಟ್ಟಿಗೆ ಕೆಲಸ ಮಾಡುತ್ತಿದ್ದು, ಈಗಾಗಲೇ ರಾಜ್ಯ ಸರ್ಕಾರದಿಂದ 5 ಲಕ್ಷ ರು. ಪರಿಹಾರ ಘೋಷಣೆ ಮಾಡಲಾಗಿದೆ. ಗಾಯಾಳುಗಳ ಆಸ್ಪತ್ರೆ ವೆಚ್ಚವನ್ನು ಸಹ ಸರ್ಕಾರ ಭರಿಸುತ್ತದೆ ಎಂದು ತಿಳಿಸಿದರು. ಇನ್ನು ಮುಂದೆ ಅಮಾಯಕರ ಸಾವು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುತ್ತೇವೆ. ಸಾವಿನ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಯುವಕರ ಸಾವು ನೋವಿನ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here