ಬೆಂಗಳೂರು : ಅತ್ತಿಬೆಲೆ ಪಟಾಕಿ ದುರಂತದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇರುವ ಪಟಾಕಿ ಗೋದಾಮುಗಳ ಸಮೀಕ್ಷೆ ನಡೆಸಿ, ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಭವಿಷ್ಯದಲ್ಲಿ ಇಂತಹ ದುರಂತಗಳು ನಡೆಯದಂತೆ ಸೂಕ್ತ ನೀತಿ ರೂಪಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಹಾವೇರಿ ಪಟಾಕಿ ಗೋದಾಮು ಸ್ಫೋಟ ಸೇರಿ 2 ತಿಂಗಳ ಅಂತರದಲ್ಲಿ ರಾಜ್ಯದಲ್ಲಿ 2 ಪಟಾಕಿ ದುರಂತ ಸಂಭವಿಸಿದ ಬೆನ್ನಲ್ಲೇ ಅವರು ಈ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್ ಅವರು, ‘ಇನ್ನು ಮುಂದೆ ಇಂತಹ ಘಟನೆ ಸಂಭವಿಸದಂತೆ ಎಚ್ಚರ ವಹಿಸಲಾಗುವುದು. ರಾಜ್ಯದಲ್ಲಿ ಇರುವ ಪಟಾಕಿ ಗೋದಾಮುಗಳಿಗೆ ಪೊಲೀಸ್ ಇಲಾಖೆ, ಜಿಲ್ಲಾಧಿಕಾರಿಗಳು ನೋಟಿಸ್ ನೀಡಿ ಸುರಕ್ಷತೆ ಪರಿಶೀಲನೆ ಮಾಡಲು ಸೂಚನೆ ನೀಡಲಾಗಿದೆ. ಜತೆಗೆ ರಾಜ್ಯಾದ್ಯಂತ ಇರುವ ಪಟಾಕಿ ಗೋದಾಮುಗಳ ಸಮೀಕ್ಷೆ ನಡೆಸಲಾಗುತ್ತದೆ’ ಎಂದು ಹೇಳಿದರು.
ಭವಿಷ್ಯದಲ್ಲಿ ಪಟಾಕಿ ದುರಂತಗಳು ನಡೆಯದಂತೆ ನೀತಿ ನಿರೂಪಣೆ ಮಾಡಲಾಗುವುದು’ ಎಂದು ಹೇಳಿದರು.
ತಮಿಳುನಾಡು ಹಾಗೂ ಕರ್ನಾಟಕ ಎರಡೂ ರಾಜ್ಯಗಳು ಒಟ್ಟಿಗೆ ಕೆಲಸ ಮಾಡುತ್ತಿದ್ದು, ಈಗಾಗಲೇ ರಾಜ್ಯ ಸರ್ಕಾರದಿಂದ 5 ಲಕ್ಷ ರು. ಪರಿಹಾರ ಘೋಷಣೆ ಮಾಡಲಾಗಿದೆ. ಗಾಯಾಳುಗಳ ಆಸ್ಪತ್ರೆ ವೆಚ್ಚವನ್ನು ಸಹ ಸರ್ಕಾರ ಭರಿಸುತ್ತದೆ ಎಂದು ತಿಳಿಸಿದರು. ಇನ್ನು ಮುಂದೆ ಅಮಾಯಕರ ಸಾವು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುತ್ತೇವೆ. ಸಾವಿನ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಯುವಕರ ಸಾವು ನೋವಿನ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದರು.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…