ಬೆಂಗಳೂರು :ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದೆ. ಗಾರೇಪಾಳ್ಯ ಜಂಕ್ಷನ್ ಬಳಿ ಬಿಎಂಟಿಸಿ ಬಸ್ ಹರಿದು ಮೂರು ವರ್ಷದ ಅಯಾನ್ ಮೃತಪಟ್ಟಿದ್ದಾನೆ.
ನಿನ್ನೆ , ದೊಡ್ಡಮ್ಮನ ಜೊತೆ ಬೈಕ್ನಲ್ಲಿ ಮನೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಬೈಕ್ನಿಂದ ಕೆಳಗೆ ಬಿದ್ದಿದ್ದ ಅಯಾನ್ ಮೇಲೆ ಬಸ್ ಹರಿದಿದೆ. ಪರಿಣಾಮ ಆಯಾನ್ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾನೆ. ಬಸ್ ಮೇಲೆ ಹರಿದಿದ್ದರಿಂದ ಅಯಾನ್ ತಲೆ ಛಿದ್ರ ಛಿದ್ರವಾಗಿದೆ.
ಈ ಬಗ್ಗೆ ಹುಳಿಮಾವು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಪೊಲೀಸರು ಬಿಎಂಟಿಸಿ ಬಸ್ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.