ಕರಾವಳಿ

ಮಂಗಳೂರು ನಗರ ಪ್ರವೇಶಿಸಿದ ಶೌರ್ಯ ಜಾಗರಣ ರಥಯಾತ್ರೆಗೆ ಭವ್ಯ ಸ್ವಾಗತ – ಕೇಸರಿಮಯವಾದ ಬಂದರು ನಗರಿ..!

ಮಂಗಳೂರು : ವಿಶ್ವ ಹಿಂದು ಪರಿಷತ್​ನ 60ನೇ ವರ್ಷಾಚರಣೆ ಪ್ರಯುಕ್ತ ದೇಶಾದ್ಯಂತ ಯುವ ಸಂಘಟನೆಯಾದ ಬಜರಂಗದಳ ನೇತೃತ್ವದಲ್ಲಿ ಸೆ.25 ರಂದು ಚಿತ್ರದುರ್ಗದಲ್ಲಿ ಆರಂಭವಾದ ಶೌರ್ಯ ರಥ ಯಾತ್ರೆ ರಾಜ್ಯದ ನಾನಾ ಜಿಲ್ಲೆಗಳಲ್ಲಿ 1600 ಕಿ.ಮೀ. ಸಂಚರಿಸಿ ಯಶಸ್ವಿಯಾಗಿ ಕಾರ್ಯಕ್ರಮಗಳನ್ನು ನಡೆಸಿ ಇದೀಗ ಕರಾವಳಿ ಜಿಲ್ಲೆ ಪ್ರವೇಶಿಸಿದ್ದು, ಪುತ್ತೂರು ಮತ್ತು ಬಂಟ್ವಾಳದಲ್ಲಿ ಯಶಸ್ವಿ ಸಮಾವೇಶಗಳನ್ನು ನಡೆಸಿ ಇದೀಗ ಮಂಗಳೂರು ನಗರ ಪ್ರವೇಶಿಸಿದೆ.

Advertisement
Advertisement
Advertisement

ನಗರದ ಹೊರವಲಯದ ಅಡ್ಯಾರಿನಲ್ಲಿ ರಥಕ್ಕೆ ಭವ್ಯ ಸ್ವಾಗತ ಕೋರಲಾಯಿತು. ಅಪರಾಹ್ನ ನಗರದಲ್ಲಿ ರಥಯಾತ್ರೆ ನಡೆಯಲಿದ್ದು ಇದಕ್ಕಾಗಿ ಭರ್ಜರಿ ತಯಾರಿ ನಡೆಸಲಾಗಿದೆ.ನಗರ ಸಂಪೂರ್ಣ ಕೇಸರಿಮಯವಾಗಿದ್ದು ಮುಂಜಾಗೃತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತನ್ನು ಏರ್ಪಡಿಸಲಾಗಿದೆ.ರಥ ಸಾಗುವ ಹಾದಿಯನ್ನು ಬಂಟಿಂಗ್ಸ್‌ ಬ್ಯಾನರುಗಳಿಂದ ಶೃಂಗರಿಸಲಾಗಿದೆ.

ಸಂಜೆ 4.30ಕ್ಕೆ ನಗರದ ಕದ್ರಿ ಮೈದಾನದಲ್ಲಿ ಬೃಹತ್‌ ಸಾರ್ವಜನಿಕ ಸಭೆ ನಡೆಯಲಿದೆ. ಚಿಂತಕ ಚಕ್ರವರ್ತಿ ಸೂಲಿಬೆಲೆ ದಿಕ್ಸೂಚಿ ಭಾಷಣ ಮಾಡಲಿದ್ದು ಸಾಧು ಸಂತರು, ವಿಹೆಚ್‌ಪಿ, ಬಜರಂಗದಳದ ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ನಾಳೆ ಸಂಜೆ 4 ಗಂಟೆಗೆ ಉಡುಪಿಯಲ್ಲಿ ಹಿಂದೂ ಸಮಾಜೋತ್ಸವ ಕಾರ್ಯಕ್ರಮದ ಮೂಲಕ ಸಮಾರೋಪಗೊಳ್ಳಲಿದೆ.

ಸಾಯಿರಾಧ ಗ್ರೂಪ್ಸ್​ ಉಡುಪಿಯ ಮನೋಹರ ಶೆಟ್ಟಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಅದಮಾರು ಮಠದ ಈಶಪ್ರಿಯ ತೀರ್ಥರು, ಮಧ್ಯಪ್ರದೇಶದ ಅಖಿಲೇಶ್ವರಾನಂದ ಮಹಾರಾಜ್​, ವಿಎಚ್​ಪಿ ದಕ್ಷಿಣ ಪ್ರಾಂತ ಕಾರ್ಯಾಧ್ಯಕ್ಷ ಎಂ.ಬಿ. ಪುರಾಣಿಕ್​, ರಾಷ್ಟ್ರೀಯ ಸಹಸಂಯೋಜಕ ಸೂರ್ಯನಾರಾಯಣ ಪಾಲ್ಗೊಳ್ಳಲಿದ್ದಾರೆ.

ಸಮಾವೇಶದಲ್ಲಿ 50 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಹೊಂದಲಾಗಿದೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago