ಅನಾಥ ಮಕ್ಕಳಿಗಾಗಿ ಬಿಗ್ ಬಾಸ್ ಶೋಗೆ ಎಂಟ್ರಿ ನೀಡಿರುವುದಾಗಿ ಚಿಕ್ಕಬಳ್ಳಾಪುರದ ಶಾಸಕ ಪ್ರದೀಪ್ ಈಶ್ವರ್ ಹೇಳಿಕೊಂಡಿದ್ದಾರೆ. ಈ ಬಿಗ್ ಬಾಸ್ ಶೋನಿಂದ ತಮಗೆ ಬರುವ ಹಣವನ್ನು ತಂದೆ ತಾಯಿ ಇಲ್ಲದ ಅನಾಥ ಮಕ್ಕಳಿಗೆ ನೀಡುವುದಾಗಿ ಅವರು ತಿಳಿಸಿದ್ದಾರೆ. ಜೊತೆಗೆ ಅವರ ಆಪ್ತರು ಹೇಳುವಂತೆ ಅತಿಥಿಯಾಗಿ ಅವರು ಬಿಗ್ ಬಾಸ್ ಮನೆಗೆ ಹೋಗದೇ ಸ್ಪರ್ಧಿಯಾಗಿಯೇ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.
ಬಿಗ್ ಬಾಸ್ ಮನೆಗೆ ಹೋದ ತಕ್ಷಣವೇ ಸ್ಫೂರ್ತಿದಾಯಕ ಮಾತುಗಳನ್ನು ಪ್ರದೀಪ್ ಈಶ್ವರ ಶುರು ಮಾಡಿದ್ದಾರೆ. ದೊಡ್ಮನೆಯಲ್ಲಿ ಅವರು ಭಾಷಣವನ್ನು ಆರಂಭಿಸಿದ್ದು, ಬಿಗ್ ಬಾಸ್ ಮನೆಯ ಸದಸ್ಯರನ್ನೂ ಉದಾಹರಣೆಯಾಗಿ ತೆಗೆದುಕೊಂಡು ಮಾತುಗಳನ್ನು ಆರಂಭಿಸಿದ್ದಾರೆ. ಆ ಮಾತುಗಳು ಕೆಲವು ಜನರಿಗೆ ಹಿಡಿಸಿದರೆ, ಇನ್ನೂ ಕೆಲವರಿಗೆ ಅವು ಇಷ್ಟವಾಗುತ್ತಿಲ್ಲ.
ಎಲ್ಲ ಸ್ಪರ್ಧಿಗಳನ್ನು ಸುದೀಪ್ ಶನಿವಾರವೇ ದೊಡ್ಮನೆ ಒಳಗೆ ಕಳುಹಿಸಿದ್ದರೆ, ಒಂದು ದಿನ ತಡವಾಗಿ ಪ್ರದೀಪ್ ದೊಡ್ಮನೆ ಪ್ರವೇಶ ಮಾಡಿದ್ದಾರೆ. ಡೊಳ್ಳು ಕುಣಿತ ಮೂಲಕ ಅವರನ್ನು ಬಿಗ್ ಬಾಸ್ ಮನೆಗೆ ಸ್ವಾಗತ ನೀಡಿದ್ದಾರೆ.
ಈ ಸಂದರ್ಭದಲ್ಲಿ ಪ್ರದೀಪ್ ಈಶ್ವರ್ ಕಂಡು ಸ್ಪರ್ಧಿಗಳು ಅಚ್ಚರಿ ವ್ಯಕ್ತ ಪಡಿಸಿದರು.
ಪ್ರದೀಪ್ ಈಶ್ವರ್ ಮನೆಗೆ ಬಂದಿರುವುದು ಹೊಸ ಕಳೆ ಬಂದಂತಾಗಿದೆ. ಒಬ್ಬ ಜನಪ್ರತಿನಿಧಿ ಎಷ್ಟು ದಿನ ಆ ಮನೆಯಲ್ಲಿ ಉಳಿಯಬಹುದು ಎನ್ನುವುದೇ ಅಚ್ಚರಿ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…