ಇಸ್ರೇಲ್​ನಲ್ಲಿ ಸಿಲುಕಿರುವ ಮಂಗಳೂರಿಗರನ್ನು ಸುರಕ್ಷಿತವಾಗಿ ಕರೆತರುವ ಜವಾಬ್ದಾರಿ ನಮ್ಮದು : ನಳಿನ್ ಕುಮಾರ್ ಕಟೀಲ್‌

0
96

ಮಂಗಳೂರು : ಇಸ್ರೇಲ್‌ನಲ್ಲಿ ಹಮಾಸ್‌ ಉಗ್ರರ ಅಟ್ಟಹಾಸದಿಂದ ಆರಂಭವಾಗಿರೋ ಯುದ್ಧದಲ್ಲಿ ಹಲವಾರು ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಈ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದು, ಇಸ್ರೇಲ್ ನಲ್ಲಿ ಐದು ಸಾವಿರ ದಕ್ಷಿಣ ಕನ್ನಡ ಜಿಲ್ಲೆಯ ಜನರು ಇದ್ದಾರೆಂಬ ಮಾಹಿತಿ ಇದೆ. ಈಗಾಗಲೇ ವಿದೇಶಾಂಗ ಇಲಾಖೆ ಸಚಿವರಿಗೆ ಪತ್ರ ಬರೆದಿದ್ದೇನೆ. ಯಾರಿಗೂ ಅಪಾಯ ಆಗದಂತೆ ಅವರಿಗೆ ರಕ್ಷಣೆ ಒದಗಿಸುತ್ತೇವೆ. ಅವರನ್ನು ಸುರಕ್ಷಿತವಾಗಿ ಕರೆ ತರುವ ಕೆಲಸ ನಮ್ಮ ಸರ್ಕಾರ ಮಾಡಲಿದೆ ಎಂದು ಭರವಸೆ ನೀಡಿದ್ದಾರೆ.ಈ ಬಗ್ಗೆ ಸಚಿವ ಮುರಳೀಧರನ್ ಅವರ ಜೊತೆಗೂ ನಾನು ಮಾತನಾಡಿದ್ದೇನೆ ಎಂದರು.

ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾರ ಜಿಲ್ಲಾಧಿಕಾರಿಗಳಿಗೆ ಜಿಲ್ಲೆಯ ಇಸ್ರೇಲ್ ವಾಸಿಗಳ ಪೂರ್ಣ ಮಾಹಿತಿ ತರಿಸಿ ಕೊಳ್ಳಲು ಸೂಚಿಸಿದ್ದೇನೆ. ಯುದ್ಧದ ಪರಿಸ್ಥಿತಿ ಇದ್ದಾಗ ಅವರ ಮನೆಯವರಿಗೆ ಆತಂಕ ಇರುತ್ತದೆ. ಈಗಲೂ ಇಸ್ರೇಲ್ ನಲ್ಲಿದ್ದವರು ಸುರಕ್ಷಿತವಾಗಿ ಇದ್ದರೂ ಭಯದ ವಾತಾವರಣ ಇದೆ. ನಾನು ಎಂಬೆಸ್ಸಿ ಜೊತೆಗೆ ಸಂಪರ್ಕದಲ್ಲಿದ್ದೇನೆ. ಯಾರೂ ಭಯ ಪಡುವ ಅಗತ್ಯ ಇಲ್ಲ, ಏನೇ ಆತಂಕ ಇದ್ದರೂ ನನ್ನನ್ನು ನೇರವಾಗಿ ಸಂಪರ್ಕಿಸಿ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here