ಭಾರತವು ಭಯೋತ್ಪಾದನೆಯನ್ನು ಬಲವಾಗಿ ಖಂಡಿಸುತ್ತದೆ : ನರೇಂದ್ರ ಮೋದಿ

0
115

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಕರೆ ಮಾಡಿದ್ದು, ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ಇಸ್ರೇಲ್ ಮೇಲೆ ಹಮಾಸ್ ಉಗ್ರರು ದಾಳಿ ನಡೆಸಿದ್ದು, ಇಲ್ಲಿಯವರೆಗೆ 1,600ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ.

ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ನೆತನ್ಯಾಹು ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರ ದೂರವಾಣಿ ಕರೆ ಮಾಡಿದ್ದಕ್ಕಾಗಿ ಮತ್ತು ಅಲ್ಲಿ ನಡೆಯುತ್ತಿರುವ ಪರಿಸ್ಥಿತಿಯ ಕುರಿತು ಅಪ್ಡೇಟ್ ಒದಗಿಸಿದ್ದಕ್ಕಾಗಿ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ಈ ಕಷ್ಟದ ಸಮಯದಲ್ಲಿ ಭಾರತದ ಜನರು ಇಸ್ರೇಲ್‌ನೊಂದಿಗೆ ದೃಢವಾಗಿ ನಿಂತಿದ್ದಾರೆ. ಭಾರತವು ಭಯೋತ್ಪಾದನೆಯನ್ನು ಬಲವಾಗಿ ಖಂಡಿಸುತ್ತದೆ ಎಂದು ಮೋದಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರತದ ಜನರಿಂದ ಹಮಾಸ್ ಉಗ್ರರ ಪೈಶಾಚಿಕ ರಕ್ಕಸ ವರ್ತನೆಗೆ ವಿರೋಧ ವ್ಯಕ್ತವಾಗಿದೆ. ಭಾರತೀಯರ ಟ್ವೀಟ್ ಮಹಾಮಳೆಗೆ ಇಸ್ರೇಲ್ ಕೂಡ ಭಾವುಕವಾಗಿದೆ. ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಇಸ್ರೇಲ್ ಜೊತೆ ನಿಲ್ಲೋಣ ಎನ್ನುವ ಸಂದೇಶವನ್ನು ಭಾರತೀಯರು ನೀಡಿದ್ದು, ಭಯೋತ್ಪಾದನೆಯ ಹಾಗೂ ಮತಾಂಧತೆಯ ವಿರುದ್ಧ ಹೋರಾಡುವಂತೆ ಕರೆ ನೀಡಲಾಗಿದೆ. ‘ವಿ ಆರ್ ವಿತ್ ಇಸ್ರೇಲ್’ ಕ್ಯಾಂಪೇನ್ ಮೂಲಕ ಭಾರತೀಯರಿಂದ ಇಸ್ರೇಲ್ ಪರ ಧ್ವನಿ ಎತ್ತಲಾಗಿದೆ.

LEAVE A REPLY

Please enter your comment!
Please enter your name here