ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಕರೆ ಮಾಡಿದ್ದು, ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
ಇಸ್ರೇಲ್ ಮೇಲೆ ಹಮಾಸ್ ಉಗ್ರರು ದಾಳಿ ನಡೆಸಿದ್ದು, ಇಲ್ಲಿಯವರೆಗೆ 1,600ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ.
ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ನೆತನ್ಯಾಹು ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರ ದೂರವಾಣಿ ಕರೆ ಮಾಡಿದ್ದಕ್ಕಾಗಿ ಮತ್ತು ಅಲ್ಲಿ ನಡೆಯುತ್ತಿರುವ ಪರಿಸ್ಥಿತಿಯ ಕುರಿತು ಅಪ್ಡೇಟ್ ಒದಗಿಸಿದ್ದಕ್ಕಾಗಿ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ಈ ಕಷ್ಟದ ಸಮಯದಲ್ಲಿ ಭಾರತದ ಜನರು ಇಸ್ರೇಲ್‌ನೊಂದಿಗೆ ದೃಢವಾಗಿ ನಿಂತಿದ್ದಾರೆ. ಭಾರತವು ಭಯೋತ್ಪಾದನೆಯನ್ನು ಬಲವಾಗಿ ಖಂಡಿಸುತ್ತದೆ ಎಂದು ಮೋದಿ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಪ್ರಧಾನಿ ಮೋದಿ ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರತದ ಜನರಿಂದ ಹಮಾಸ್ ಉಗ್ರರ ಪೈಶಾಚಿಕ ರಕ್ಕಸ ವರ್ತನೆಗೆ ವಿರೋಧ ವ್ಯಕ್ತವಾಗಿದೆ. ಭಾರತೀಯರ ಟ್ವೀಟ್ ಮಹಾಮಳೆಗೆ ಇಸ್ರೇಲ್ ಕೂಡ ಭಾವುಕವಾಗಿದೆ. ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಇಸ್ರೇಲ್ ಜೊತೆ ನಿಲ್ಲೋಣ ಎನ್ನುವ ಸಂದೇಶವನ್ನು ಭಾರತೀಯರು ನೀಡಿದ್ದು, ಭಯೋತ್ಪಾದನೆಯ ಹಾಗೂ ಮತಾಂಧತೆಯ ವಿರುದ್ಧ ಹೋರಾಡುವಂತೆ ಕರೆ ನೀಡಲಾಗಿದೆ. ‘ವಿ ಆರ್ ವಿತ್ ಇಸ್ರೇಲ್’ ಕ್ಯಾಂಪೇನ್ ಮೂಲಕ ಭಾರತೀಯರಿಂದ ಇಸ್ರೇಲ್ ಪರ ಧ್ವನಿ ಎತ್ತಲಾಗಿದೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…