ಉದ್ಯೋಗ ಮಾಹಿತಿ

ಜಯದೇವ ಹೃದ್ರೋಗ ಸಂಸ್ಥೆಯ 100 ಸ್ಟಾಫ್‌ನರ್ಸ್‌ಗಳಿಗೆ ಅರ್ಜಿ ಆಹ್ವಾನ : ವೇತನ ಶ್ರೇಣಿ ರೂ.33,450 ರಿಂದ 62600

ಬೆಂಗಳೂರಿನ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ವೃಂದದ ಸ್ಟಾಫ್‌ ನರ್ಸ್‌ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ. ಈ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಿದ್ದು, ಆಸಕ್ತರಿಂದ ಆನ್‌ಲೈನ್‌ ಅರ್ಜಿ ಆಹ್ವಾನಿಸಿದೆ.

Advertisement
Advertisement
Advertisement

ಉದ್ಯೋಗ ಸಂಸ್ಥೆ : ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಬೆಂಗಳೂರು.

ಹುದ್ದೆಯ ಹೆಸರು : ಸ್ಟಾಫ್‌ನರ್ಸ್

ಹುದ್ದೆಗಳ ಸಂಖ್ಯೆ : 100

ವೇತನ ಶ್ರೇಣಿ : ರೂ.33,450-62,600.

ಶೈಕ್ಷಣಿಕ ಅರ್ಹತೆ : ಡಿಪ್ಲೊಮ ನರ್ಸಿಂಗ್ / ಬಿಎಸ್ಸಿ ನರ್ಸಿಂಗ್ ಉತ್ತೀರ್ಣರಾಗಿ, ನರ್ಸಿಂಗ್ ಕೌನ್ಸಿಲ್‌ನಲ್ಲಿ ರಿಜಿಸ್ಟ್ರೇಷನ್‌ ಪಡೆದಿರಬೇಕು.

ವಯಸ್ಸಿನ ಅರ್ಹತೆ :

ಅರ್ಜಿ ಸಲ್ಲಿಕೆಗೆ ನಿಗದಿತ ಕೊನೆ ದಿನಾಂಕಕ್ಕೆ ಕನಿಷ್ಠ 18 ವರ್ಷ ಆಗಿರಬೇಕು, ಗರಿಷ್ಠ ವಯಸ್ಸಿನ ಅರ್ಹತೆ ಜನರಲ್‌ ಕೆಟಗರಿಯವರಿಗೆ 35 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 38 ವರ್ಷ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ಮೀರಿರಬಾರದು.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 04-10-2023

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 02-11-2023

ಇ-ಪೋಸ್ಟ್‌ ಆಫೀಸ್‌ನಲ್ಲಿ ಶುಲ್ಕವನ್ನು ಪಾವತಿ ಮಾಡಲು ಕೊನೆ ದಿನಾಂಕ : 04-11-2023

ಅರ್ಜಿ ಶುಲ್ಕ ವಿವರ:

ಸಾಮಾನ್ಯ ಅರ್ಹತೆ ಮತ್ತು ಇತರೆ ಹಿಂದುಳಿದ ಪ್ರವರ್ಗದವರಿಗೆ ರೂ.750.ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ.500.ಶುಲ್ಕವನ್ನು ಕಂಪ್ಯೂಟರೈಸ್ಡ್‌ ಅಂಚೆ ಕಚೇರಿಗಳಲ್ಲಿ ಮಾತ್ರ ಪಾವತಿಸಬೇಕು.

ಆಯ್ಕೆ ವಿಧಾನ : ಸ್ಪರ್ಧಾತ್ಮಕ ಪರೀಕ್ಷೆ ಮೂಲಕ

ಒಟ್ಟು 100 ಅಂಕಗಳ 2 ಗಂಟೆ ಅವಧಿಯ ಪರೀಕ್ಷೆ ಇರುತ್ತದೆ. ಇದರಲ್ಲಿ ಸಾಮಾನ್ಯ ಇಂಗ್ಲಿಷ್, ಸಾಮಾನ್ಯ ಜ್ಞಾನ, ತಾರ್ಕಿಕ ಮತ್ತು ಮಾನಸಿಕ ಸಾಮರ್ಥ್ಯ, ಕಂಪ್ಯೂಟರ್ ಜ್ಞಾನ ಕುರಿತು ಭಾಗ ಒಂದರಲ್ಲಿ 20 ಅಂಕಗಳಿಗೆ ಪರೀಕ್ಷೆ ಇರುತ್ತದೆ. ಭಾಗ 2 ರಲ್ಲಿ ಉಳಿದ 80 ಅಂಕಗಳಿಗೆ ಜಿಎನ್‌ಎಂ / ಬಿಎಸ್ಸಿ ನರ್ಸಿಂಗ್ ಕುರಿತ ವಿಷಯಗಳ ಕುರಿತು ಪ್ರಶ್ನೆ ಇರುತ್ತದೆ.

ಸ್ಪರ್ಧಾತ್ಮಕ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ನಡೆಸಲಾಗುತ್ತದೆ. ಇತರೆ ಹೆಚ್ಚಿನ ಮಾಹಿತಿಗೆ ಕೆಳಗಿನ ಅಧಿಸೂಚನೆ ಲಿಂಕ್ ಕ್ಲಿಕ್ ಮಾಡಿ ಓದಿರಿ.

https://cetonline.karnataka.gov.in/keawebentry456/sjmcrec2023/gazette_notification_Jayadeva_hospkannada.pdf

https://cetonline.karnataka.gov.in/kea/sjmcrec2023

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago