ಮಂಗಳೂರು: ಬೈಂದೂರು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಚೈತ್ರಾ ಮತ್ತು ಆಕೆಯ ತಂಡ ಗೋವಿಂದ ಬಾಬು ಪೂಜಾರಿ ಎಂಬ ಉದ್ಯಮಿಯಿಂದ ಹಣ ಪಡೆದು ವಂಚಿಸಿ ಪೊಲೀಸರ ಅತಿಥಿಯಾಗಿದ್ದಾರೆ . ಈ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಸಿಸಿಬಿ ತನಿಖೆ ನಡೆಸುತ್ತಿದ್ದು, ವಿಚಾರಣೆಗೆ ಹಾಜರಾಗುವಂತೆ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿಗೆ ಬೆಂಗಳೂರು ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ.
ಸಿಸಿಬಿ ಎಸಿಪಿ ರೀನಾ ಸುವರ್ಣ ನೋಟಿಸ್ ಜಾರಿ ಮಾಡಿದ್ದು, ಇನ್ನೆರಡು ದಿನಗಳಲ್ಲಿ ವಿಚಾರಣೆಗೆ ಹಾಜರಾಗುವಂತೆ ಸ್ವಾಮೀಜಿಗೆ ಸೂಚನೆ ನೀಡಲಾಗಿದೆ.