ಬೆಂಗಳೂರು: ಮೊದಲ ಬಾರಿಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 25 ಮತ್ತು 26ರಂದು ‘ಬೆಂಗಳೂರು ಕಂಬಳ-ನಮ್ಮ ಕಂಬಳ’ ಶೀರ್ಷಿಕೆಯಡಿ ಕಂಬಳ ನಡೆಯಲಿದೆ.
ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಸಾರುವ ಕಂಬಳಕ್ಕೆ ಅದರದೇ ಆದ ರೀತಿ ನೀತಿ, ಕ್ರಮಗಳು ಇದ್ದು ಅದರಲ್ಲಿ ಪ್ರಮುಖವಾದುದು ಕರೆ ಪೂಜೆ ಕೂಡ.
ಇದಕ್ಕೆ ಪೂರ್ವಭಾವಿಯಾಗಿ ಕರೆಪೂಜೆಯನ್ನು (ಗುದ್ದಲಿಪೂಜೆ) ಡಿಸಿಎಂ ಡಿ ಕೆ ಶಿವಕುಮಾರ್ ಅವರು ನೆರವೇರಿಸಿ ಮಾತನಾಡಿದ ಅವರು, ವಿವಿದೆಡೆ ನಡೆಯುವ 20ಕಂಬಳಕ್ಕೆ ತಲಾ 5ಲಕ್ಷ ನೀಡುವುದರ ಕುರಿತು ಬಜೆಟ್ ನಲ್ಲಿ ಈಗಾಗಲೇ ಚರ್ಚಿಸಲಾಗಿದ್ದು, ಬೆಂಗಳೂರು ಕಂಬಳಕ್ಕೆ ಸಂಪೂರ್ಣ ಸಹಕಾರ ನೀಡಲು ನಾನು ಬದ್ದ ಎಂದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಮಾತನಾಡಿ ದಕ್ಷಿಣ ಕನ್ನಡ ಜಿಲ್ಲೆಯ ಜನ ಎಲ್ಲಾ ಕ್ಷೇತ್ರದಲ್ಲೂ ಕಾರ್ಯನಿರ್ವಹಿಸುತ್ತಿದ್ದು ಈ ಕಂಬಳ ಇತಿಹಾಸದಲ್ಲಿ ದಾಖಲೆ ನಿರ್ಮಿಸಲಿದ್ದು, ಪುತ್ತೂರು ಶಾಸಕ ಅಶೋಕ್ ರೈ ಅವರು ಈ ಹಿಂದೆ ನನ್ನ ಶಿಷ್ಯನಾಗಿದ್ದು ಈಗ ಡಿ.ಕೆ.ಶಿ ಅವರ ಶಿಶ್ಯರಾಗಿದ್ದಾರೆ ಎಂದರು.
ಕಂಬಳ ಎಲ್ಲರ ಪಾಲಿನ ಅಚ್ಚುಮೆಚ್ಚಿನ ಕ್ರೀಡೆಯಾಗಿದ್ದು, ಪಕ್ಷಭೇದವಿಲ್ಲದೆ ನಡೆಯಲಿದೆ. ರಾಜ್ಯ ಸರಕಾರದಿಂದ ನೆರವು ಸಿಗಲಿದೆ. ಅರಮನೆ ಮೈದಾನದಲ್ಲಿ ಅದ್ದೂರಿ ಕಂಬಳಕ್ಕೆ ಎಲ್ಲ ರೀತಿಯ ಮೂಲಸೌಕರ್ಯ ಮಾಡಬೇಕಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳ ವ್ಯವಸ್ಥೆಯಾಗಬೇಕಿದೆ. ಫುಡ್ ಫೆಸ್ಟಿವಲ್ ನಡೆಯಲಿದ್ದು, ಸುಮಾರು 125 ಸ್ಟಾಲ್‌ಗಳ ವ್ಯವಸ್ಥೆಯಾಗಬೇಕಿದೆ. ತುಳುನಾಡಿನ ಶ್ರೀಮಂತ ಸಂಸ್ಕೃತಿ ದೇಶಕ್ಕೆ ಪರಿಚಯಿಸಯವ ಕೆಲಸ ರಾಜ್ಯ ರಾಜಧಾನಿಯಲ್ಲಿ ನಡೆಯಬೇಕಾದ ಕಾರಣ ಸಾಕಷ್ಟು ಖರ್ಚು ತಗುಲಲಿದೆ ಎಂದು ಕಂಬಳ ಆಯೋಜನಾ ಸಮಿತಿಯ ಅಧ್ಯಕ್ಷರಾದ ಪುತ್ತೂರು ಶಾಸಕ ಅಶೋಕ್ ರೈ ಹೇಳಿದ್ದಾರೆ.
ಕರೆಪೂಜೆಯಲ್ಲಿ ಮಾಜಿ ಸಿಎಂ ಸದಾನಂದಗೌಡ, ಮಾಜಿ ಡಿಸಿಎಂ ಅಶ್ವಥ್ ನಾರಾಯಣ್, ಶಾಸಕರಾದ ಎನ್ ಎ ಹ್ಯಾರಿಸ್, ಅಶೋಕ್ ಕುಮಾರ್ ರೈ, ಕಂಬಳ ಸಮಿತಿಯ ಗುರುಕಿರಣ್, ಪ್ರಕಾಶ್ ಶೆಟ್ಟಿ, ಗುಣರಂಜನ್ ಶೆಟ್ಟಿ, ಉಮೇಶ್ ಶೆಟ್ಟಿ, ಕಾಂತರಾಜ್ ಮತ್ತಿತರರು ಪಾಲ್ಗೊಂಡರು.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…