ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಬಸ್‌ಗೆ ಎಂಜಿನಿಯರಿಂಗ್ ವಿದ್ಯಾರ್ಥಿ ಬಲಿಯಾದ ಘಟನೆ ಯಶವಂತಪುರದ ಗೋವರ್ಧನ ಬಳಿ ನಡೆದಿದೆ.
ಗಂಗಾಧರ್ (21) ಮೃತ ವಿದ್ಯಾರ್ಥಿ. ಗಾರೆಪ್ಪನ ಪಾಳ್ಯ ರಸ್ತೆ ಮಾರ್ಗವಾಗಿ ಹೂವಿನ ಮಾರ್ಕೆಟ್ ಸಮೀಪ ಘಟನೆ ನಡೆದಿದೆ. ಹೆಚ್‌ಎಎಲ್‌ಗೆ ಇಂಟರ್ನಿಶಿಪ್ ಸರ್ಟಿಫಿಕೇಟ್ ತರಲು ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಗಂಗಾಧರ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಗಂಗಾಧರ್ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭ, ಬಿಎಂಟಿಸಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಈ ವೇಳೆ ಬಸ್‌ನ ಚಕ್ರ ಗಂಗಾಧರ್ ಮೇಲೆ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅಪಘಾತದ ಬಳಿಕ ಬಸ್ ನಿಲ್ಲಿಸದೇ ಚಾಲಕ ಪರಾರಿಯಾಗಿದ್ದು, ಬಸ್‌ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಮೃತ ವಿದ್ಯಾರ್ಥಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಅಪಘಾತದ ಸ್ಥಳಕ್ಕೆ ಯಶವಂತಪುರ ಸಂಚಾರ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತ ಎಸಗಿದ್ದ ಬಿಎಂಟಿಸಿ ಬಸ್ ಚಾಲಕನಿಗೆ ಠಾಣೆಗೆ ಬರುವಂತೆ ಸೂಚನೆ ನೀಡಿದ್ದಾರೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…