ಬೆಂಗಳೂರು: ಬೆಂಗಳೂರಿನ ಲಗ್ಗೆರೆಯಲ್ಲಿ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಸಿಡಿದು ಗುಜರಿ ಅಂಗಡಿಗೆ ಬೆಂಕಿ ತಗುಲಿದ್ದು, ಸುತ್ತಮುತ್ತಲಿನ ಮನೆಗೂ ಬೆಂಕಿ ಆವರಿಸಿದ ಘಟನೆ ನಡೆದಿದೆ.
ಘಟನೆಯಲ್ಲಿ ಗುಜರಿ ಅಂಗಡಿ ಪಕ್ಕದಲ್ಲಿದ್ದ ಐದಾರು ಬೈಕ್‍ಗಳು ಭಸ್ಮವಾಗಿವೆ. ಅಲ್ಲದೇ ಭಾರೀ ಪ್ರಮಾಣದ ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಆದರೂ ಬೆಂಕಿ ಹತೋಟಿಗೆ ಬರುತ್ತಿಲ್ಲ.
ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ಆಗಮಿಸಿದ್ದು ಬೆಂಕಿ ನಿಯಂತ್ರಿಸಲು ಪ್ರಯತ್ನಪಡುತ್ತಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಟ್ರಾನ್ಸ್‌ಫಾರ್ಮರ್ ಸಿಡಿದಿರುವ ಶಂಕೆ ಇದೆ.