199 ಇಸ್ರೇಲಿ ಪ್ರಜೆಗಳನ್ನು ಒತ್ತೆಯಾಳಾಗಿಟ್ಟುಕೊಂಡ ಹಮಾಸ್ ಬಂಡುಕೋರ ಸಂಘಟನೆ

0
116

ಟೆಲ್ ಅವಿವ್: ಹಮಾಸ್ ಬಂಡುಕೋರ ಸಂಘಟನೆ 199 ಜನರನ್ನು ಒತ್ತೆಯಾಳಾಗಿ ಇಟ್ಟುಕೊಂಡಿದೆ ಎಂದು ಇಸ್ರೇಲಿ ಮಿಲಿಟರಿ ವಕ್ತಾರ ಡೇನಿಯಲ್ ಹಗರಿ ಮಾಧ್ಯಮ ಸಭೆಯಲ್ಲಿ ಹೇಳಿದ್ದಾರೆ.

ಅಕ್ಟೋಬರ್ 7ರಂದು ಹಮಾಸ್ ರಾಕೆಟ್ ದಾಳಿ ನಡೆಸಿದ ಬಳಿಕ ಅಕ್ರಮವಾಗಿ ಇಸ್ರೇಲ್ ಗಡಿಯನ್ನು ನುಸುಳಿದೆ. ಇಲ್ಲಿ ಜನರ ಹತ್ಯೆ ಮಾಡುವುದಲ್ಲದೇ ಮಹಿಳೆಯರು ಮಕ್ಕಳು ಸೇರಿದಂತೆ ಇಸ್ರೇಲಿ ಪ್ರಜೆಗಳನ್ನು ಒತ್ತೆಯಾಳಾಗಿ ಇಟ್ಟುಕೊಂಡಿದೆ ಎಂದು ಡೇನಿಯಲ್ ಹಗರಿ ವಿವರಿಸಿದರು.

ಯುದ್ಧ ಆರಂಭವಾದ ಬಳಿಕ ಗುಂಡು ಹಾರಿಸಿ, ಇರಿದು ಮತ್ತು ಸುಟ್ಟು 1,400 ಕ್ಕೂ ಜನರನ್ನು ಹಮಾಸ್ ಹತ್ಯೆ ಮಾಡಿದೆ. ಏಳು ದಿನಗಳ ನಿರಂತರ ಬಾಂಬ್ ದಾಳಿಯು ಹಮಾಸ್ ನೆಲೆಗಳನ್ನು ನಾಶಪಡಿಸಿದೆ. ಎರಡೂ ಕಡೆಗಳಲ್ಲಿ ಒಟ್ಟು 3,000 ಜೀವಗಳನ್ನು ಯುದ್ಧ ಬಲಿ ತೆಗೆದುಕೊಂಡಿದೆ.

ಯುದ್ಧ ಉಲ್ಬಣಗೊಳ್ಳುತ್ತಿದ್ದಂತೆ ಇಸ್ರೇಲಿ ಸೈನ್ಯವು ಗಾಜಾ ಪಟ್ಟಿಯ ಉತ್ತರದಲ್ಲಿ 1.1 ಮಿಲಿಯನ್ ಪ್ಯಾಲೆಸ್ತೀನಿಯಾದವರಿಗೆ ಸ್ಥಳಾಂತರಿಸುವ ಆದೇಶಗಳನ್ನು ನೀಡಿತು. ಅದರ 2.4 ಮಿಲಿಯನ್ ಜನಸಂಖ್ಯೆಯ ಸರಿಸುಮಾರು ಅರ್ಧದಷ್ಟು ಜನರು ತಮ್ಮ ಸುರಕ್ಷತೆಗಾಗಿ ದಕ್ಷಿಣದ ಕಡೆಗೆ ಚಲಿಸುವಂತೆ ಒತ್ತಾಯಿಸಿದೆ ಎಂದರು.

LEAVE A REPLY

Please enter your comment!
Please enter your name here