ಮಂಗಳೂರು : ‘ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಜಾತಿ ಮತ ಬೇಧವಿಲ್ಲದೆ ನಡೆಯುತ್ತಿರುವ ದಸರಾ ಉತ್ಸವ ನಾಡಿಗೇ ಮಾದರಿ’ ಎಂದು ಸಿರೋ-ಮಲಬಾರ್ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕುಝಿ ಹೇಳಿದರು.
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಸೋಮವಾರ ಸೌಹಾರ್ದ ಭೇಟಿ ನೀಡಿ ದೇವರ ದರ್ಶನ ಪಡೆದ ಅವರು, ಕ್ಷೇತ್ರದಲ್ಲಿ ನಡೆಯುತ್ತಿರುವ ನವರಾತ್ರಿ ಉತ್ಸವ ಹಾಗೂ ದಸರಾ ಮಹೋತ್ಸವದಲ್ಲಿ ಪಾಲ್ಗೊಂಡರು.
‘ನಾವೆಲ್ಲರೂ ದೇವರ ಮಕ್ಕಳು.ಮಾನವರಿಗೆ ಒಂದೇ ಜಾತಿ ಒಂದೇ ಮತ ಒಂದೇ ದೇವರು ಎಂದು ಜಗತ್ತಿಗೆ ಸಾರಿದ ಬ್ರಹ್ಮಶ್ರೀ ನಾರಾಯಣಗುರುಗಳಂತಹ ಮಹಾಪುರುಷರ ಸಿದ್ಧಾಂತ ಇಂದಿನ ಸಮಾಜಕ್ಕೆ ಅಗತ್ಯ’ ಎಂದರು.
ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಎಚ್.ಎಸ್.ಸಾಯಿರಾಂ, ಪ್ರಧಾನ ಕಾರ್ಯದರ್ಶಿ ಮಾಧವ ಸುವರ್ಣ, ಖಜಾಂಚಿ ಪದ್ಮರಾಜ್ ಆರ್. , ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಸದಸ್ಯರಾದ ರಾಧಾಕೃಷ್ಣ, ಮುಂಬೈ ಭಾರತ್ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ ಅವರು ಲಾರೆನ್ಸ್ ಮುಕುಝಿ ಅವರನ್ನು ಆತ್ಮೀಯವಾಗಿ ಕ್ಷೇತ್ರಕ್ಕೆ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಕಂಕನಾಡಿ ಆಲ್ಫೋನ್ಸ್ ಚರ್ಚ್ ಧರ್ಮಗುರು ಫಾ.ಮಾಣಿ, ಬೆಳ್ತಂಗಡಿ ಧರ್ಮಪ್ರಾಂತ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಸೆಬಾಸ್ಟಿಯನ್ ಕೆ.ವಿ ಇದ್ದರು.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…