ಬೆಂಗಳೂರು: ವಕೀಲ ಕೆವಿ ಅರವಿಂದ್ ಅವರನ್ನು 2 ವರ್ಷಗಳ ಅವಧಿಗೆ ಕರ್ನಾಟಕ ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಲು ಕೇಂದ್ರ ಸರ್ಕಾರವು ಬುಧವಾರ ಅಧಿಸೂಚನೆ ಹೊರಡಿಸಿದೆ.
ಅರವಿಂದ್ ಅವರನ್ನು ಸಂವಿಧಾನದ 224ನೇ ವಿಧಿ ಕ್ಲಾಸ್ (1) ರ ಅಡಿ ದೊರೆತಿರುವ ಅಧಿಕಾರ ಬಳಸಿ ರಾಷ್ಟ್ರಪತಿ ಅವರು ನ್ಯಾಯಮೂರ್ತಿ ಹುದ್ದೆಗೆ ನೇಮಕ ಮಾಡಿದ್ದಾರೆ. 2023ರ ಜುಲೈ 18ರಂದು ಅರವಿಂದ್ ಅವರನ್ನು ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸ್ಸು ಮಾಡಿತ್ತು.
ಅರವಿಂದ್ ಅವರು 23 ವರ್ಷಗಳಿಂದ ವಕೀಲರಾಗಿದ್ದಾರೆ ಹಾಗೂ 567 ವರದಿಯಾಗಿರುವ ತೀರ್ಪುಗಳಲ್ಲಿ ವಾದಿಸಿದ್ದಾರೆ ಎಂದು ಕೊಲಿಜಿಯಂ ಹೇಳಿತ್ತು.