ಬೆಂಗಳೂರಲ್ಲಿ 250 ಮೀಟರ್​ ಎತ್ತರದ ‘ಸ್ಕೈ ಡೆಸ್ಕ್’ ನಿರ್ಮಾಣಕ್ಕೆ ಡಿಕೆ ಶಿವಕುಮಾರ್​​​ ಪ್ರಸ್ತಾಪ

By: Ommnews

Date:

Share post:

ಬೆಂಗಳೂರು : ಬೆಂಗಳೂರಿನಲ್ಲಿ 250 ಮೀಟರ್​ ಎತ್ತರದ ಸ್ಕೈ ಡೆಸ್ಕ್ ನಿರ್ಮಾಣಕ್ಕೆ ಮಂಗಳವಾರ ಡಿಸಿಎಂ ಡಿಕೆ ಶಿವಕುಮಾರ್​ ಪ್ರಸ್ತಾಪ ಮಾಡಿದ್ದಾರೆ. ಒಂದು ವೇಳೆ ಈ ಸ್ಕೈ ಡೆಸ್ಕ್ ನಿರ್ಮಾಣವಾದರೆ ದೇಶದ ಅತಿ ಎತ್ತರದ ವೀಕ್ಷಣಾ ಗೋಪುರ ಎಂಬ ಹೆಗ್ಗಳಿಕೆ ಪಡೆಯಲಿದೆ.

Advertisement
Advertisement
Advertisement

ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿಕೆ ಶಿವಕುಮಾರ್​​, ಯೋಜನೆಗೆ ತಗುಲುವ ವೆಚ್ಚ ಮತ್ತು ಅದರ ನಿರ್ಮಾಣಕ್ಕೆ ಬೇಕಾದ 8-10 ಎಕರೆ ಭೂಮಿಯನ್ನು ಗುರುತಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸ್ಕೈ ಡೆಸ್ಕ್ ಯೋಜನೆಯು ಆಲದ ಮರದ ರಚನೆಯಲ್ಲಿರಲಿದ್ದು, 250 ಮೀಟರ್ ಎತ್ತರವಿರಲಿದೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಡಿಕೆ ಶಿವಕುಮಾರ್​​, ಆಸ್ಟ್ರೀಯಾ ಮೂಲದ COOP HIMMELB(L)AU ಸಂಸ್ಥೆಯು ವರ್ಲ್ಡ್‌ ಡಿಸೈನ್ ಆರ್ಗನೈಸೇಶನ್ ಸಹಕಾರದೊಂದಿಗೆ ಬೆಂಗಳೂರಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸ್ಕೈ ಡೆಸ್ಕ್ ಯೋಜನೆಯನ್ನು ಪರಿಶೀಲಿಸಿದೆ. ಇದು ನಿರ್ಮಾಣವಾದ ನಂತರ ದೇಶದಲ್ಲೇ ಅತಿ ಎತ್ತರದ ವೀಕ್ಷಣಾ ಗೋಪುರ ಎನ್ನುವ ಕೀರ್ತಿಗೆ ಪಾತ್ರವಾಗಲಿದೆ. ಯೋಜನೆಯ ಅನುಷ್ಠಾನಕ್ಕೆ ಸೂಕ್ತವಾದ 8-10 ಎಕರೆ ಭೂಮಿಯನ್ನು ಗುರುತಿಸುವುದರ ಜೊತೆಗೆ ಆರ್ಥಿಕ ಕಾರ್ಯಸಾಧ್ಯತೆಯನ್ನು ನಿರ್ಣಯಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ ಎಂದು ಮಾಹಿತಿ ನೀಡಿದ್ದಾರೆ.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section