ಬೆಂಗಳೂರು : ಬೆಂಗಳೂರಿನಲ್ಲಿ 250 ಮೀಟರ್ ಎತ್ತರದ ಸ್ಕೈ ಡೆಸ್ಕ್ ನಿರ್ಮಾಣಕ್ಕೆ ಮಂಗಳವಾರ ಡಿಸಿಎಂ ಡಿಕೆ ಶಿವಕುಮಾರ್ ಪ್ರಸ್ತಾಪ ಮಾಡಿದ್ದಾರೆ. ಒಂದು ವೇಳೆ ಈ ಸ್ಕೈ ಡೆಸ್ಕ್ ನಿರ್ಮಾಣವಾದರೆ ದೇಶದ ಅತಿ ಎತ್ತರದ ವೀಕ್ಷಣಾ ಗೋಪುರ ಎಂಬ ಹೆಗ್ಗಳಿಕೆ ಪಡೆಯಲಿದೆ.
ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿಕೆ ಶಿವಕುಮಾರ್, ಯೋಜನೆಗೆ ತಗುಲುವ ವೆಚ್ಚ ಮತ್ತು ಅದರ ನಿರ್ಮಾಣಕ್ಕೆ ಬೇಕಾದ 8-10 ಎಕರೆ ಭೂಮಿಯನ್ನು ಗುರುತಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸ್ಕೈ ಡೆಸ್ಕ್ ಯೋಜನೆಯು ಆಲದ ಮರದ ರಚನೆಯಲ್ಲಿರಲಿದ್ದು, 250 ಮೀಟರ್ ಎತ್ತರವಿರಲಿದೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಡಿಕೆ ಶಿವಕುಮಾರ್, ಆಸ್ಟ್ರೀಯಾ ಮೂಲದ COOP HIMMELB(L)AU ಸಂಸ್ಥೆಯು ವರ್ಲ್ಡ್ ಡಿಸೈನ್ ಆರ್ಗನೈಸೇಶನ್ ಸಹಕಾರದೊಂದಿಗೆ ಬೆಂಗಳೂರಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸ್ಕೈ ಡೆಸ್ಕ್ ಯೋಜನೆಯನ್ನು ಪರಿಶೀಲಿಸಿದೆ. ಇದು ನಿರ್ಮಾಣವಾದ ನಂತರ ದೇಶದಲ್ಲೇ ಅತಿ ಎತ್ತರದ ವೀಕ್ಷಣಾ ಗೋಪುರ ಎನ್ನುವ ಕೀರ್ತಿಗೆ ಪಾತ್ರವಾಗಲಿದೆ. ಯೋಜನೆಯ ಅನುಷ್ಠಾನಕ್ಕೆ ಸೂಕ್ತವಾದ 8-10 ಎಕರೆ ಭೂಮಿಯನ್ನು ಗುರುತಿಸುವುದರ ಜೊತೆಗೆ ಆರ್ಥಿಕ ಕಾರ್ಯಸಾಧ್ಯತೆಯನ್ನು ನಿರ್ಣಯಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ ಎಂದು ಮಾಹಿತಿ ನೀಡಿದ್ದಾರೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…