ಇತರೆ

ಪ್ಯಾಲೆಸ್ತೀನಿ ಜನರಿಗೆ ಎಲ್ಲಾ ರೀತಿಯ ಮಾನವೀಯ ನೆರವುಗಳನ್ನು ಮುಂದುವರೆಸುವ ಭರವಸೆಯನ್ನು ನೀಡಿದ ಮೋದಿ

ನವದೆಹಲಿ: ಗಾಜಾ ಪಟ್ಟಿ ಪ್ರದೇಶದ ಅಲ್‌ ಅಹ್ಲಿ ಆಸ್ಪತ್ರೆಯಲ್ಲಿ ನಡೆದ ದುರ್ಘಟನೆಯಲ್ಲಿ 500ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ, ಗುರುವಾರ ಪ್ಯಾಲೆಸ್ತೀನ್‌ ಅಧ್ಯಕ್ಷ ಮಹಮ್ಮದ್‌ ಅಬ್ಬಾಸಿ ಅವರಿಗೆ ದೂರವಾಣಿ ಕರೆ ಮಾಡಿ ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟರ್‌ನಲ್ಲಿ ಮಾಹಿತಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ‘ಪ್ಯಾಲೆಸ್ತೀನ್‌ ಅಧ್ಯಕ್ಷ ಮೊಹಮ್ಮದ್‌ ಅಬ್ಬಾಸಿ ಅವರೊಂದಿಗೆ ಇಂದು ಮಾತುಕತೆ ನಡೆಸಿದೆ. ಈ ವೇಳೆ ಅಲ್‌ ಅಹ್ಲಿ ಆಸ್ಪತ್ರೆ ದುರಂತದಲ್ಲಿ ಅಮಾಯಕರ ನಾಗರಿಕರ ಕುರಿತು ತೀವ್ರ ಸಂತಾಪ ವ್ಯಕ್ತಪಡಿಸಿದೆ. ಜೊತೆಗೆ ಪ್ಯಾಲೆಸ್ತೀನಿ ಜನರಿಗೆ ಎಲ್ಲಾ ರೀತಿಯ ಮಾನವೀಯ ನೆರವುಗಳನ್ನು ಮುಂದುವರೆಸುವ ಭರವಸೆಯನ್ನು ನೀಡಿದ್ದೇನೆ. ಅಲ್ಲದೆ ಆ ಪ್ರದೇಶದಲ್ಲಿ ತಲೆದೋರಿರುವ ಭಯೋತ್ಪಾದನೆ, ಹಿಂಸಾಚಾರ ಮತ್ತು ಭದ್ರತಾ ಪರಿಸ್ಥಿತಿ ಕುಸಿಯುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಜೊತೆಗೆ ಇಸ್ರೇಲ್‌- ಪ್ಯಾಲೆಸ್ತೀನ್‌ ವಿಷಯದಲ್ಲಿ ಸುದೀರ್ಘ ಕಾಲದಿಂದ ಹೊಂದಿರುವ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತಿಳಿಸಲಾಯಿತು’ ಎಂದು ಮಾಹಿತಿ ನೀಡಿದ್ದಾರೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago