ರಾಜ್ಯೋತ್ಸವದಂದು ಐದು ಕನ್ನಡಗೀತೆಗಳನ್ನು ಕಡ್ಡಾಯವಾಗಿ ಹಾಡುವ ಮೂಲಕ ನುಡಿ ನಮನ ಸಲ್ಲಿಸುವಂತೆ ಆದೇಶಿಸಿದ ರಾಜ್ಯ ಸರ್ಕಾರ

0
82

ಬೆಂಗಳೂರು: ರಾಜ್ಯದೆಲ್ಲೆಡೆ ನ.1 ರಂದು ಆಚರಿಸುವ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕರ್ನಾಟಕ ಸಂಭ್ರಮ 50 ಅಭಿಯಾನದ ಅಂಗವಾಗಿ ಆಯ್ಕೆ ಮಾಡಿರುವ ನಾಡಿನ ಹೆಸರಾಂತ ಕವಿಗಳ 5 ಕನ್ನಡ ಗೀತೆಗಳನ್ನು ಹಾಡುವ ಮೂಲಕ ಸಮಸ್ತ ಕನ್ನಡಿಗರು ಕನ್ನಡಾಂಬೆಗೆ ನುಡಿ ನಮನ (ಗೀತೆ ಗಾಯನ) ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ.

ರಾಜ್ಯದ ಎಲ್ಲ ಜಿಲ್ಲಾ ಹಾಗೂ ತಾಲೂಕು ಮತ್ತು ಗ್ರಾಮಪಂಚಾಯಿತಿ ಮಟ್ಟದಲ್ಲಿ ನ.1ರಂದು ರಾಜ್ಯೋತ್ಸವ ಕಾರ್ಯಕ್ರಮದ ವೇಳಾಪಟ್ಟಿಯಲ್ಲಿರುವಂತೆ ಧ್ವಜಾರೋಹಣ, ರಾಷ್ಟ್ರಗೀತೆ, ನಾಡಗೀತೆ, ತಾಯಿಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಂತರ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು (ಹುಯಿಳಗೋಳ ನಾರಾಯಣ ರಾಯರು), ಎಲ್ಲಾದರೂ ಇರು ಎಂತಾದರು ಇರು (ಕುವೆಂಪು), ಒಂದೇ ಒಂದೇ ಕರ್ನಾಟಕ ಒಂದೇ ( ದ. ರಾ. ಬೇಂದ್ರೆ), ಹೊತ್ತಿತೋ ಹೊತ್ತಿತು ಕನ್ನಡ ದೀಪ ( ಸಿದ್ದಯ್ಯ ಪುರಾಣಿಕ) ಮತ್ತು ಹೆಸರಾಯಿತು ಕರ್ನಾಟಕ- ಉಸಿರಾಗಲಿ ಕನ್ನಡ (ಚನ್ನವೀರ ಕಣವಿ) ಗೀತೆಗಳನ್ನು ಕಡ್ಡಾಯವಾಗಿ ಹಾಡಬೇಕು ಎಂದು ಆದೇಶದಲ್ಲಿ ಹೇಳಿದೆ

LEAVE A REPLY

Please enter your comment!
Please enter your name here