ಕ್ರೀಡಾ ಸುದ್ದಿ

ಇಂಗ್ಲೆಂಡ್‌ ವಿರುದ್ಧ ದಕ್ಷಿಣ ಆಫ್ರಿಕಾಗೆ ಗೆಲುವು

ಮುಂಬೈ : ‘ವಾಂಖೇಡೆ ಸ್ಟೇಡಿಯಂ’ನಲ್ಲಿ ನಡೆದ ಮಹತ್ವದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಹಾಲಿ ಚಾಂಪಿಯನ್ ಇಂಗ್ಲೆಂಡ್‌ ಹೀನಾಯ ಸೋಲು ಅನುಭವಿಸಿದ್ದು, ಜಾಸ್‌ ಬಟ್ಲರ್‌ ಬಳಗದ ಹಾದಿ ದುರ್ಗಮಗೊಂಡಿದೆ.

Advertisement
Advertisement
Advertisement

ದಕ್ಷಿಣ ಆಫ್ರಿಕಾ ನೀಡಿದ 400 ರನ್ ಗಳ ಬೃಹತ್ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡ ದಕ್ಷಿಣ ಆಫ್ರಿಕಾ ಬೌಲಿಂಗ್ ಬಿಗಿ ದಾಳಿಗೆ ನಲುಗಿ ಒಬ್ಬರಾದಂತೆ ಒಬ್ಬರು ಪೆವಿಲಿಯನ್ ಪರೇಡ್ ನಡೆಸಿದರು.

22 ಓವರ್ ಗಳಲ್ಲಿ 170 ರನ್ ಗಳಿಸಲಷ್ಟೇ ಶಕ್ತವಾಗಿ 229 ರನ್ ಗಳ ಅಂತರದ ಹೀನಾಯ ಸೋಲನ್ನು ಅನುಭವಿಸಿತು.

ಜಾನಿ ಬೈರ್‌ಸ್ಟೋ 10, ಜೋ ರೂಟ್ 2, ಡೇವಿಡ್ ಮಲಾನ್ 6, ಬೆನ್ ಸ್ಟೋಕ್ಸ್ 5, ನಾಯಕ ಜೋಸ್ ಬಟ್ಲರ್ 15, ಹ್ಯಾರಿ ಬ್ರೂಕ್ 17,ಆದಿಲ್ ರಶೀದ್ 10, ಡೇವಿಡ್ ವಿಲ್ಲಿ 12, ಗಸ್ ಅಟ್ಕಿನ್ಸನ್ 35 ರನ್ ಗಳಿಸಿ ಔಟಾದರು. ಮಾರ್ಕ್ ವುಡ್ 17 ಎಸೆತಗಳಲ್ಲಿ 43ರನ್ ಬಾರಿಸಿ 5 ಆಕರ್ಷಕ ಸಿಕ್ಸರ್ ಗಳನ್ನು ಸಿಡಿಸಿ ಕೊನೆಯಲ್ಲಿ ರಂಜಿಸಿದರು. ಕೊನೆಯವರಾಗಿ ಬ್ಯಾಟಿಂಗ್ ಗೆ ಇಳಿಯಬೇಕಾಗಿದ್ದ ರೀಸ್ ಟೋಪ್ಲಿ ಗಾಯಾಳಾಗಿ ನಿವೃತ್ತಿಯಾದ ಕಾರಣ ಬ್ಯಾಟಿಂಗ್ ಗೆ ಬರಲು ಸಾಧ್ಯವಾಗದ ಕಾರಣಕ್ಕೆ 9 ವಿಕೆಟ್ ಕಳೆದುಕೊಂದಾಗಲೇ ಪಂದ್ಯ ಮುಕ್ತಾಯವಾಯಿತು.

ಜೆರಾಲ್ಡ್ ಕೋಟ್ಜೇ 3 ವಿಕೆಟ್ ಪಡೆದು ಮಿಂಚಿದರೆ, ಲುಂಗಿ ಎನ್ಗಿಡಿ, ಮಾರ್ಕೊ ಜಾನ್ಸೆನ್ ತಲಾ 2, ಕಗಿಸೊ ರಬಾಡ ಮತ್ತು ಕೇಶವ್ ಮಹಾರಾಜ್ ತಲಾ1 ವಿಕೆಟ್ ಪಡೆದು ಬೌಲಿಂಗ್ ಸಾಮರ್ಥ್ಯ ತೋರಿದರು.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago