ಒಬ್ಬ ರೈತನಿಗೆ ಪ್ರೋತ್ಸಾಹ ನೀಡಿದರೆ 100 ಮಂದಿಗೆ ಉದ್ಯೋಗ ಸಿಗುತ್ತೆ: ಸಚಿವ ಚಲುವರಾಯಸ್ವಾಮಿ

By: Ommnews

Date:

Share post:

ಮೈಸೂರು : ಒಬ್ಬ ರೈತನಿಗೆ ಪ್ರೋತ್ಸಾಹ ನೀಡಿದರೆ, 100 ಮಂದಿಗೆ ಉದ್ಯೋಗ ನೀಡುತ್ತಾನೆ. ಆ ಶಕ್ತಿ ರೈತನಿಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು. ನಗರದ ಜೆ.ಕೆ. ಮೈದಾನದ ಎಂಎಂಸಿ ಅಮೃತ ಮಹೋತ್ಸವ ಭವನದಲ್ಲಿ ನಡೆದ ರೈತ ದಸರಾ ಹಾಗೂ ಪ್ರಗತಿಪರ ರೈತರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾತನಾಡಿ, ಒಬ್ಬ ವ್ಯಕ್ತಿಗೆ ಸರ್ಕಾರ ಕೆಲಸ ಕೊಟ್ಟರೆ ಅವನು ತನ್ನ ಕುಟುಂಬವನ್ನು ಮಾತ್ರ ಮುನ್ನಡೆಸುತ್ತಾನೆ ಎಂದರು.

Advertisement
Advertisement
Advertisement

ಬರಗಾಲ, ಆರ್ಥಿಕ ಸಮಸ್ಯೆ, ನೀರಿನ ಸಮಸ್ಯೆ ಸೇರಿದಂತೆ ಯಾವುದೇ ತೊಂದರೆ ರೈತರಿಗೆ ಬಂದರೂ ರಾಜ್ಯ ಸರ್ಕಾರ ಸದಾ ರೈತರ ಜೊತೆಯಿದ್ದು ಪ್ರೋತ್ಸಾಹಿಸುವಂತಹ ಕೆಲಸ ಮಾಡಿಕೊಂಡು ಬರುತ್ತಿದೆ. ಈ ಬಾರಿ ಬರಗಾಲದಿಂದ ರೈತರಿಗೆ ವಿದ್ಯುತ್ ಸಮಸ್ಯೆ ಉಂಟಾಗಬಾರದದು ಎಂಬ ಕಾರಣಕ್ಕೆ ಬೇರೆ ರಾಜ್ಯಗಳಿಂದ ವಿದ್ಯುತ್ ಖರೀದಿಸಿ ರೈತರಿಗೆ ಸಹಾಯ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು. ರೈತರು ತಂತ್ರಜ್ಞಾನದಲ್ಲಿ ಮುಂದಿದ್ದಾರೆ. ದೇಶದಲ್ಲಿ ಶೆ.80 ಅಧಿಕ ಮಂದಿ ಕೃಷಿಯನ್ನು ನಂಬಿ ಜೀವನ ನಡೆಸುತ್ತಿದ್ದಾರೆ. ಆದರೆ, ಅದಕ್ಕೆ ಪ್ರಾಮುಖ್ಯತೆ ನೀಡುತ್ತಿಲ್ಲ. ರೈತರಿಗೆ ಯಾವುದೇ ಸಹಕಾರ ಬೇಕಾದರೂ ನೀಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಭರವಸೆ ನೀಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ, ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಪಶುಸಂಗೋಪನಾ ಹಾಗೂ ರೇಷ್ಮೆ ಸಚಿವ ಕೆ. ವೆಂಕಟೇಶ್, ಶಾಸಕರಾದ ಕೆ. ಹರೀಶ್, ರಮೇಶ್ ಬಂಡಿಸಿದ್ದೇಗೌಡ, ಮೇಯರ್ ಶಿವಕುಮಾರ್, ಉಪ ಮೇಯರ್ ಡಾ.ಜಿ. ರೂಪ, ನಗರ ಪಾಲಿಕೆ ಸದಸ್ಯೆ ಪ್ರಮೀಳ ಭರತ್, ರೈತ ದಸರಾ ಉಪ ಸಮಿತಿ ಉಪ ವಿಶೇಷಾಧಿಕಾರಿ ಡಾ.ಎಂ. ಕೃಷ್ಣಂರಾಜು, ಕಾರ್ಯಾಧ್ಯಕ್ಷ ಡಾ.ಬಿ.ಎಸ್. ಚಂದ್ರಶೇಖರ್, ಸದಸ್ಯ ಕಾರ್ಯದರ್ಶಿ ಡಾ. ನಾಗರಾಜು, ಅಧ್ಯಕ್ಷ ಕೆ.ಪಿ. ಯೋಗೇಶ್, ಉಪಾಧ್ಯಕ್ಷರಾದ ಕೆ.ಎಸ್. ಮಾಲೇಗೌಡ, ಹೊನ್ನನಾಯಕ ಮೊದಲಾದವರು ಇದ್ದರು.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section