ಮೈಸೂರು : ಅರಮನೆ ಆವರಣದಲ್ಲಿ ಕಾವಾಡಿಗರಿಗೆ ಮತ್ತು ಮಾವುತರಿಗೆ ವಿಶೇಷ ಉಪಹಾರ ಬಡಿಸಿ ವಿಭಿನ್ನ ರೀತಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.
ವಿಶ್ವ ವಿಖ್ಯಾತ ಮೈಸೂರಿನಲ್ಲಿ ದಸರಾ ಮಹೋತ್ಸವ ನಡೆಯುತ್ತಿದೆ. ಇಲ್ಲಿನ ಮಾವುತರು ಮತ್ತು ಕಾವಾಡಿಗಳಿಗೆ ಸ್ವತಃ ಶೋಭಾ ಕರಂದ್ಲಾಜೆ ಉಪಾಹಾರ ಬಡಿಸಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಅರಮನೆ ಆವರಣದಲ್ಲಿ ಉಪಾಹಾರಕ್ಕೆ ವ್ಯವಸ್ಥೆ ಮಾಡಿದ್ದು, ಮಾವುತರು ಮತ್ತು ಕಾವಾಡಿಗಳಿಗಾಗಿ ವಿಶೇಷ ಉಪಾಹಾರ ಸಿದ್ಧಪಡಿಸಲಾಗಿದೆ. ಇಷ್ಟುಮಾತ್ರವಲ್ಲದೇ ಕೇಕ್ ಕತ್ತರಿಸುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಶೋಭಾ ಆಚರಿಸಿಕೊಂಡಿದ್ದು, ಸಚಿವೆಗೆ ಸಂಸದ ಪ್ರತಾಪ್ ಸಿಂಹ ಹಾಗೂ ಸ್ಥಳಿಯ ಬಿಜೆಪಿ ಮುಖಂಡರು ಸಾಥ್ ನೀಡಿದ್ದಾರೆ.
ಹುಟ್ಟುಹಬ್ಬದ ಹಿನ್ನೆಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶೋಭಾ ಕರಂದ್ಲಾಜೆಗೆ ಕರೆ ಮಾಡಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಇನ್ನು ಮೈಸೂರಿನಲ್ಲಿ ಶೋಭಾ ಕರಂದ್ಲಾಜೆಗೆ ಸಂಸದ ಪ್ರತಾಪ್ ಸಿಂಹ ವಿಶ್ ಮಾಡಿ ಹುಟ್ಟು ಹಬ್ಬದ ಶುಭಾಶಯ ಹೇಳಿದ್ದಾರೆ.