ಬಂಟ್ವಾಳ: ಸಜೀಪ ಪಡು ಗ್ರಾಮದ ತಲೆಮೊಗರು ನಿವಾಸಿ ಸನತ್ ಕುಮಾರ್ ಎಂಬ ಯುವಕ ಸಾಲದ ಬಾಧೆಯಿಂದ ಮಾನಸಿಕವಾಗಿ ನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸಜೀಪದಲ್ಲಿ ನಡೆದಿದೆ.
ಸನತ್ ಅವರು ಮೀನು ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದು, ಮೀನು ಮಾರಾಟಕ್ಕಾಗಿ ಇತ್ತೀಚಿಗೆ ಸಾಲ ಮಾಡಿ ಟೆಂಪೋ ರಿಕ್ಷಾವನ್ನು ಖರೀದಿ ಮಾಡಿದ್ದ. ಆದರೆ ಇತ್ತೀಚಿನ ದಿನಗಳಲ್ಲಿ ಮೀನು ವ್ಯಾಪಾರದಲ್ಲಿ ಹಣ ಕಳೆದುಕೊಂಡು ವಾಹನ ಖರೀದಿಗಾಗಿ ಮಾಡಿದ್ದ ಬ್ಯಾಂಕ್ ಸಾಲದ ಕಂತನ್ನು ಕಟ್ಟಲು ಸಾಧ್ಯವಾಗಿರಿಲ್ಲ ಎಂದು ಹೇಳಲಾಗಿದೆ.ಇನ್ನು ಸಾಲದ ಕಂತನ್ನು ಕಟ್ಟಲು ಸಾಧ್ಯವಾಗದೇ ಟೆಂಪೋ ವನ್ನು ಕೂಡ ಮಾರಾಟ ಮಾಡಿದ್ದ ಎನ್ನಲಾಗಿದೆ.
ಜೊತೆಗೆ ಕೋಳಿ ಅಂಕಕ್ಕೆ ಹೋಗುತ್ತಿದ್ದ ಈತ ಅಲ್ಲಿಯೂ ಹಣ ಕಳೆದುಕೊಂಡು ಮಾನಸಿಕವಾಗಿ ನೊಂದುಕೊಂಡಿದ್ದು, ಸಾಲದ ಬಾಧೆಯಿಂದ ಹೊರಬರಲು ಅಸಾಧ್ಯ ಪರಿಸ್ಥಿತಿಯಲ್ಲಿದ್ದ ಈತ ಮನೆಯವರು ಹತ್ತಿರದ ಭಜನಾ ಮಂದಿರದಲ್ಲಿ ನಡೆಯುವ ನವರಾತ್ರಿ ಪೂಜೆಗೆ ತೆರಳಿದ್ದ ವೇಳೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ.
ಪೂಜೆ ಮುಗಿಸಿಕೊಂಡು ಮನೆಗೆ ಬಂದ ವೇಳೆ ಈತನ ಕೋಣೆಗೆ ಬಾಗಿಲು ಹಾಕಿಕೊಂಡಿದ್ದನ್ನು ಗಮನಿಸಿ ಕರೆದಾಗ ಈತನಿಂದ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಹಾಗಾಗಿ ಬಾಗಿಲು ಮುರಿದು ನೋಡಿದಾಗ ಈತ ಪಕ್ಕಾಸಿಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ.
ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಎಸ್.ಐ.ಹರೀಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…