ಹುಲಿವೇಷ ಕುಣಿತದ ವೇಳೆ ಆಯ ತಪ್ಪಿ ಬಿದ್ದು ಅನಾಹುತ

0
102

ಮಂಗಳೂರು : ಹುಲಿವೇಷ ಕುಣಿತದ ವೇಳೆ ಹುಲಿವೇಷಧಾರಿಯೊಬ್ಬ ಆಯ ತಪ್ಪಿ ಬಿದ್ದು ಗಾಯಗೊಂಡ ಘಟನೆ ಮಂಗಳೂರಿನ ಮಂಗಳಾದೇವಿ ದೇವಸ್ಥಾನದ ವಠಾರದಲ್ಲಿ ನಡೆದಿದೆ.

ದೇವರ ಎದುರು ಹುಲಿವೇಷ ಧರಿಸಿ ಪ್ರದರ್ಶನದ ವೇಳೆ ಘಟನೆ ನಡೆದಿದ್ದು, ಮುಳಿಹಿತ್ಲು ಎಂಬಲ್ಲಿನ ಹುಲಿವೇಷ ತಂಡದ ಕುಣಿತದ ವೇಳೆ ದುರ್ಘಟನೆ ನಡೆದಿದೆ.

ಹುಲಿವೇಷಧಾರಿಯೊಬ್ಬರು ಕಸರತ್ತು ಪ್ರದರ್ಶನದ ವೇಳೆ ರಿವರ್ಸ್ ಪಲ್ಟಿ ಹೊಡೆಯುತ್ತಿದ್ದರು. ಈ ವೇಳೆ ಆಯ ತಪ್ಪಿ ತಲೆ ನೆಲಕ್ಕೆ ಬಡಿದು ಅನಾಹುತ ನಡೆದಿದೆ. ತಲೆ ನೆಲಕ್ಕೆ ಬಡಿದು ಕತ್ತು ಉಳುಕಿದ ಪರಿಣಾಮ ಹುಲಿವೇಷಧಾರಿಗೆ ಗಾಯವಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿ ಹುಲಿವೇಷಧಾರಿ ಯುವಕನಿಗೆ ಚಿಕಿತ್ಸೆ ನೀಡಲಾಗಿದೆ. ಸದ್ಯ ಸಣ್ಣ ಗಾಯಗಳೊಂದಿಗೆ ಅಪಾಯದಿಂದ ಯುವಕ ಪಾರಾಗಿದ್ದಾನೆ.

LEAVE A REPLY

Please enter your comment!
Please enter your name here