ಸುಳ್ಯ: ಕಾರು ಮತ್ತು ಬೈಕ್ ನಡುವೆ ಅಪಘಾತ -ಬೈಕ್ ಸವಾರನಿಗೆ ಗಾಯ

0
80

ಸುಳ್ಯ: ಕಾರು ಹಾಗೂ ಬುಲೆಟ್ ಬೈಕ್ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಅರಂತೋಡು ಗ್ರಾಮದ ಪೆಲ್ತಡ್ಕದಲ್ಲಿ ಸಂಭವಿಸಿದೆ.

ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಬುಲೆಟ್ ಬೈಕ್ ಹಾಗೂ ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಪೆಲ್ತಡ್ಕದಲ್ಲಿ ಮುಖಾಮುಖಿ ಢಿಕ್ಕಿ ಹೊಡೆದಿದ್ದು, ಬೈಕ್ ಸವಾರನ ಕಾಲಿಗೆ ಗಾಯವಾಗಿದ್ದು, ಅವರನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here