ಉತ್ತರಾಖಂಡ ಮಾಜಿ ಸಿಎಂ ಹರೀಶ್ ರಾವತ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ

0
90

ಡೆಹ್ರಾಡೂನ್: ಉತ್ತರಾಖಂಡ ಮಾಜಿ ಸಿಎಂ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಹರೀಶ್ ರಾವತ್ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿ ಅವರ ಎದೆಗೆ ಪೆಟ್ಟು ಬಿದ್ದಿದೆ ಎಂದು ವರದಿಯಾಗಿದೆ.

ಹರೀಶ್ ರಾವತ್ ಅವರು ಪತ್ರಿಕಾಗೋಷ್ಠಿಯೊಂದಕ್ಕೆ ಭಾಗವಹಿಸಲು ಹಲ್ದ್ವಾನಿಯಿಂದ ಉಧಮ್ ಸಿಂಗ್ ನಗರದ ಕಾಶಿಪುರಕ್ಕೆ ತೆರಳುತ್ತಿದ್ದ ವೇಳೆ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಕಾರಿನಲ್ಲಿ ರಾವತ್ ಅವರ ಜೊತೆಗೆ ಪ್ರಯಾಣಿಸುತ್ತಿದ್ದ ವೈಯಕ್ತಿಕ ಭದ್ರತಾ ಅಧಿಕಾರಿ ಮತ್ತು ಚಾಲಕನಿಗೂ ಗಾಯಗಳಾಗಿದ್ದು, ಅವರ ಕೈ ಹಾಗೂ ತಲೆಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಅಪಘಾತವಾದ ತಕ್ಷಣವೇ ರಾವತ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ರಾವತ್ ಅವರನ್ನು ಪರೀಕ್ಷಿಸಿದ ಬಳಿಕ ಅವರು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here