ದೇಶ

ಇನ್ನು ಮುಂದೆ ಶಾಲಾ ಪಠ್ಯಪುಸ್ತಕಗಳಲ್ಲಿ ‘ಇಂಡಿಯಾ’ ಬದಲಿಗೆ ‘ಭಾರತ್’

ನವದೆಹಲಿ: ಶಾಲಾ ಪಠ್ಯಪುಸ್ತಕಗಳಲ್ಲಿ ದೇಶದ ಹೆಸರನ್ನು ಇಂಡಿಯಾ ಎಂಬುವುದರ ಬದಲಾಗಿ “ಭಾರತ್” ಎಂದು ಬದಲಿಸಲು, ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಅಂಡ್ ಟ್ರೈನಿಂಗ್(ಎನ್‌ಸಿಇಆರ್‌ಟಿ) ಸಮಿತಿ ಮಾಡಿದ ಶಿಫಾರಸ್ಸನ್ನು ಅದರ ಸದಸ್ಯರು ಸರ್ವಾನುಮತದಿಂದ ಅಂಗೀಕರಿಸಿದ್ದಾರೆ. ಹೀಗಾಗಿ ಇನ್ನು ಮುಂದಿನ ದಿನಗಳಲ್ಲಿ ಎಲ್ಲಾ ವಿಷಯಗಳ ಶಾಲಾ ಪಠ್ಯಕ್ರಮದಲ್ಲಿ”ಭಾರತ್” ಹೆಸರು ಕಾಣಸಿಗಲಿದೆ.

Advertisement
Advertisement
Advertisement

ಸಮಿತಿಯ ಸದಸ್ಯರಲ್ಲಿ ಒಬ್ಬರಾಗಿರುವ ಸಿಐ ಇಸಾಕ್ ಪ್ರಕಾರ, ಹೊಸ ಎನ್‌ಸಿಇಆರ್‌ಟಿ ಪುಸ್ತಕಗಳಲ್ಲಿ ಹೆಸರು ಬದಲಾವಣೆಯಾಗಿರುತ್ತದೆ. ಈ ಪ್ರಸ್ತಾವನೆಯನ್ನು ಕೆಲ ತಿಂಗಳ ಹಿಂದೆಯೇ ಮಂಡಿಸಲಾಗಿದ್ದು, ಈಗ ಅದನ್ನು ಅಂಗೀಕರಿಸಲಾಗಿದೆ ಎಂದು ಇಸಾಕ್ ಹೇಳಿದ್ದಾರೆ.

ಪಠ್ಯಪುಸ್ತಕಗಳಲ್ಲಿ ‘ಪ್ರಾಚೀನ ಇತಿಹಾಸ’ ಬದಲಿಗೆ ‘ಶಾಸ್ತ್ರೀಯ ಇತಿಹಾಸ’ ನಾಮಕರಣವನ್ನು ಅಳವಡಿಸಿಕೊಳ್ಳಲು ಸಮಿತಿಯು ಶಿಫಾರಸು ಮಾಡಿದ್ದು ಅವುಗಳ ಮಹತ್ವವನ್ನು ಸಿಐ ಇಸಾಕ್ ಒತ್ತಿ ಹೇಳಿದ್ದಾರೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago