ಕರಾವಳಿ

ಮಂಗಳೂರು : ಅ. 29ರಿಂದ ವಿಮಾನಗಳ ಹಾರಾಟ ಹೆಚ್ಚಳ

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಚಳಿಗಾಲದ ಋತು ಅ. 29ಕ್ಕೆ ಆರಂಭವಾಗುತ್ತಿದ್ದು ಈ ಅವಧಿಯಲ್ಲಿ ವಿಮಾನಗಳ ಹಾರಾಟ ಹೆಚ್ಚಳವಾಗಲಿದೆ.

Advertisement
Advertisement
Advertisement

ಅ. 29ರಿಂದ ನ.15ರ ಅವಧಿಯಲ್ಲಿ ವಿಮಾನಗಳ ಹಾರಾಟದಲ್ಲಿ ಶೇ. 26ರಷ್ಟು ವಿಮಾನಗಳ ಹಾರಾಟ ಹೆಚ್ಚಾಗಲಿದೆ. ಪ್ರಸ್ತುತ ಇರುವ ವಿಮಾನಗಳ ಸಂಖ್ಯೆ 136ರಿಂದ 172ಕ್ಕೆ ಏರಿಕೆಯಾಗಲಿದೆ.

ಸ್ಪೈಸ್‌ ಜೆಟ್‌ ವಿಮಾನವು ಬೆಂಗಳೂರಿಗೆ ಮಂಗಳವಾರ ಹೊರತುಪಡಿಸಿ ಉಳಿದ ದಿನಗಳಲ್ಲಿ ನಿತ್ಯ ಎರಡು ವಿಮಾನಗಳನ್ನು ನ. 6ರಿಂದ ಪ್ರಾರಂಭಿಸಲಿದೆ. ಮಂಗಳವಾರ ಒಂದು ವಿಮಾನ ಹಾರಾಟ ಮಾಡಲಿದೆ.

ನ. 15ರಿಂದ ಬೆಂಗಳೂರಿಗೆ ನಿತ್ಯ ಎರಡು ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಸಂಚರಿಸಲಿದ್ದು, ಈ ಪೈಕಿ ಒಂದು ವಿಮಾನ ಕಣ್ಣೂರು/ತಿರುವನಂತಪುರಕ್ಕೆ ಸಂಪರ್ಕ ಕಲ್ಪಿಸಲಿದೆ. ಇಂಡಿಗೊ ಸಂಸ್ಥೆಯೂ ನ. 3ರಿಂದ ಮುಂಬಯಿಗೆ ನಾಲ್ಕನೇ ದೈನಂದಿನ ವಿಮಾನ ಯಾನವನ್ನು ಪ್ರಾರಂಭಿಸಲಿದೆ. ಎರಡನೇ ಮತ್ತು ನಾಲ್ಕನೇ ಶನಿವಾರದಂದು 5 ಇಂಡಿಗೋ ವಿಮಾನಗಳು ಹಾರಾಟ ನಡೆಸಲಿವೆ. ಚೆನ್ನೈಗೆ ದೈನಂದಿನ ವಿಮಾನದ ಜತೆಗೆ ವಾರಕ್ಕೆ ನಾಲ್ಕು ಹೆಚ್ಚುವರಿ ವಿಮಾನಗಳನ್ನು ಕಲ್ಪಿಸಲಾಗುತ್ತಿದೆ. ಮುಂದಿನ ವರ್ಷದ ಮಾರ್ಚ್‌ ಒಳಗಾಗಿ ಇಂಡಿಗೋ ವಿಮಾನವು ಮಂಗಳೂರಿನಿಂದ ಪಾಟ್ನಾ, ರಾಂಚಿ, ಕೋಲ್ಕತಾ ನಡುವೆ ವಿಮಾನಯಾನ ಆರಂಭಿಸಲಿದೆ.

ಇಂಡಿಗೋ ವಿಮಾನ ಪ್ರಸ್ತುತ ಬೆಂಗಳೂರಿಗೆ ನಿತ್ಯ 5 ವಿಮಾನ ಸೇವೆ ನೀಡುತ್ತಿದೆ. ಹೈದರಾಬಾದ್‌ಗೆ ನಿತ್ಯ 2 ಹಾಗೂ ದಿಲ್ಲಿಗೆ ನಿತ್ಯ 1 ವಿಮಾನ ಹಾರಾಟವಿದ್ದು, ಇದು ಮುಂದುವರಿಯಲಿದೆ.

ಅಂತಾಷ್ಟ್ರೀಯ ಹಾಗೂ ದೇಶಿಯ ಹಂತದಲ್ಲಿ ಮಂಗಳೂರು ವಿಮಾನ ನಿಲ್ದಾಣವು ವಾರಕ್ಕೆ 136 ವಿಮಾನಗಳನ್ನು ನಿರ್ವಹಿಸುತ್ತಿದೆ. ಇದು ನ. 15ರಿಂದ 172 ವಿಮಾನಗಳಿಗೆ ಏರಿಕೆಯಾಗಲಿದೆ ಎಂದು ವಿಮಾನ ನಿಲ್ದಾಣ ಪ್ರಾಧಿಕಾರದ ಪ್ರಕಟನೆ ತಿಳಿಸಿದೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago