ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾಗೆ ಚುನಾವಣಾ ಆಯೋಗ ನೋಟಿಸ್

By: Ommnews

Date:

Share post:

ನವದೆಹಲಿ : ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರದ ವೇಳೆ, ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಭಾರತೀಯ ಚುನಾವಣಾ ಆಯೋಗ ಗುರುವಾರ ಶೋಕಾಸ್ ನೋಟಿಸ್ ನೀಡಿದೆ

Advertisement
Advertisement
Advertisement

ಪ್ರಿಯಾಂಕಾ ಗಾಂಧಿ, ವೃಥಾ ಆರೋಪ ಮಾಡಿದ್ದಾರೆ ಎಂದು ಬಿಜೆಪಿ ಬುಧವಾರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿತ್ತು. ರಾಜಸ್ಥಾನದ ದೌಸಾದಲ್ಲಿ ಭಾಷಣ ಮಾಡುವಾಗ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪ ಪ್ರಿಯಾಂಕಾ ಗಾಂಧಿ ಮೇಲಿದೆ. ಅಕ್ಟೋಬರ್ 30ರ ಸಂಜೆ 5 ಗಂಟೆಯೊಳಗೆ ನೋಟಿಸ್‌ಗೆ ಉತ್ತರಿಸುವಂತೆ ಪ್ರಿಯಾಂಕಾ ಗಾಂಧಿ ಅವರಿಗೆ ಆಯೋಗ ಸೂಚಿಸಿದೆ.

ಅಕ್ಟೋಬರ್ 20 ರಂದು ದೌಸಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪ್ರಿಯಾಂಕಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದೃಢೀಕೃತವಲ್ಲದ ಆರೋಪಗಳನ್ನು ಮಾಡಿದ್ದರು.

ನಾನು ಇತ್ತೀಚೆಗೆ ಟಿವಿಯಲ್ಲಿ ವಿಡಿಯೋ ಒಂದನ್ನು ನೋಡಿದೆ. ಇದು ನಿಜವೋ ಸುಳ್ಳೋ ಗೊತ್ತಿಲ್ಲ. ದೇವನಾರಾಯಣ ದೇವಸ್ಥಾನಕ್ಕೆ ತೆರಳಿದ್ದ ಪ್ರಧಾನಿ ಮೋದಿ ಕಾಣಿಕೆ ಪೆಟ್ಟಿಗೆಯಲ್ಲಿ ದೇಣಿಗೆ ಲಕೋಟೆಯನ್ನು ಹಾಕಿದ್ದರು. ಅದರಲ್ಲಿ ಏನಿರಬಹುದು ಎಂದು ಜನರು ಆಶ್ಚರ್ಯ ಪಟ್ಟಿದ್ದರು, ಆದರೆ ಅದನ್ನು ತೆರೆದಾಗ 21 ರೂಪಾಯಿ ಇತ್ತು ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದರು.

ಈ ವಿಚಾರವಾಗಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದ ಬಿಜೆಪಿ, ಪ್ರಿಯಾಂಕಾ ಅವರು ಚುನಾವಣಾ ಪ್ರಚಾರದ ಸಮಯದಲ್ಲಿ ಸುಳ್ಳು ಹೇಳಿಕೆಗಳನ್ನು ನೀಡಿ ಪ್ರಧಾನಿ ನರೇಂದ್ರ ಮೋದಿಯವರ ವೈಯಕ್ತಿಕ ಧಾರ್ಮಿಕ ಶ್ರದ್ಧೆಯನ್ನು ಪ್ರಶ್ನಿಸಿದ್ದಾರೆ ಎಂದು ಆರೋಪಿಸಿತ್ತು. ಜತೆಗೆ, ಪ್ರಿಯಾಂಕಾ ಗಾಂಧಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿತ್ತು.

‘ಮಾದರಿ ನೀತಿ ಸಂಹಿತೆ ಮತ್ತು ಆರ್‌ಪಿ ಕಾಯ್ದೆಯನ್ನು ಉಲ್ಲಂಘಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಅಕ್ಟೋಬರ್ 20 ರಂದು ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ನಾವು ಚುನಾವಣಾ ಆಯೋಗದ ಸದಸ್ಯರನ್ನು ಭೇಟಿ ಮಾಡಿದ್ದೇವೆ. ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮಾದರಿ ನೀತಿ ಸಂಹಿತೆಗಿಂತ ಮೇಲಿದ್ದಾರೆಯೇ ಎಂದು ನಾವು ಚುನಾವಣಾ ಆಯೋಗವನ್ನು ಕೇಳಲು ಬಯಸುತ್ತೇವೆ. ಆಕೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತೇವೆ’ ಎಂದು ಕಾನೂನು ಸಚಿವ ಅರ್ಜುನ್ ಮೇಘವಾಲ್ ಹೇಳಿದ್ದರು.

ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಇತರ ನಾಯಕರ ಸಾರ್ವಜನಿಕ ಚಟುವಟಿಕೆಗಳೊಂದಿಗೆ ಸಂಬಂಧ ಹೊಂದಿಲ್ಲದ ಖಾಸಗಿ ಜೀವನದ ಎಲ್ಲಾ ಅಂಶಗಳನ್ನು ಟೀಕೆಗಳಿಂದ ದೂರವಿಡಬೇಕು ಎಂದು ಪ್ರಿಯಾಂಕಾ ಅವರಿಗೆ ನೀಡಿದ ನೋಟಿಸ್​ನಲ್ಲಿ ಚುನಾವಣಾ ಆಯೋಗ ಚುನಾವಣಾ ನೀತಿ ಸಂಹಿತೆಯಲ್ಲಿನ ನಿಬಂಧನೆಯನ್ನು ಉಲ್ಲೇಖಿಸಿದೆ.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section