ಬಂಟ್ವಾಳ :ಬುಧವಾರ ರಾತ್ರಿ ಪಾಣೆಮಂಗಳೂರು ಶಾರದೋತ್ಸವ ಮೆರವಣಿಗೆ ವೇಳೆ ಎರಡು ತಂಡಗಳ ನಡುವೆ ನಡೆದ ಗಲಾಟೆ ಮುಂದುವರಿದ ಭಾಗವಾಗಿ ಗುರುವಾರ ರಾತ್ರಿ ಚೂರಿ ಇರಿತದವರೆಗೆ ಮುಂದುವರಿದಿದೆ.
ಗುರುವಾರ ರಾತ್ರಿ 9ಗಂಟೆಗೆ ನಡೆದ ಘಟನೆಯಲ್ಲಿ ತಂಡಗಳ ನಡುವೆ ವೈಯಕ್ತಿಕ ಕಲಹದ ಮುಂದುವರಿದ ಭಾಗವಾಗಿ ಮೂವರ ಮೇಲೆ ಮತ್ತೊಂದು ತಂಡದ ಸದಸ್ಯರು ಇರಿದಿದ್ದಾಗಿ ಹೇಳಲಾಗಿದ್ದು, ಘಟನೆಯಿಂದ ಮೂವರು ಗಾಯಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೋಳಂಗಡಿ ನಿವಾಸಿಗಳಾದ ದೇವದಾಸ್, ಸಂದೀಪ್ ,ಶಂಕರ್ ಚೂರಿ ಇರಿತಕ್ಕೊಳಗಾದವರು. ಬೋಳಂಗಡಿ ನಿವಾಸಿ ಶೋಧನ್, ಕಲ್ಲಡ್ಕ ನಿವಾಸಿ ಯತೀಶ್,ಮೆಲ್ಕಾರ್ ನಿವಾಸಿಗಳಾದ ಚೇತನ್,ಪ್ರಸನ್ನ,ಪ್ರದೀಪ್ ಮತ್ತು ಪ್ರಕಾಶ್ ಅವರ ತಂಡ ಸೇರಿಕೊಂಡು ಹಲ್ಲೆ ಮಾಡಿದ್ದಲ್ಲದೆ ಚೂರಿಯಿಂದ ಇರಿದಿದ್ದಾರೆ ಎಂದು ಅವರು ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಘಟನೆಯಿಂದ ಗಾಯಗೊಂಡ ಮೂವರನ್ನು ಆರಂಭದಲ್ಲಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಓರ್ವನಿಗೆ ಗಂಭೀರ ಸ್ವರೂಪದ ಗಾಯವಾಗಿದ್ದರಿಂದ ಮೂವರನ್ನು ಮಂಗಳೂರು ಎ.ಜೆ.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…