ವಿದ್ಯಾರ್ಥಿನಿ ಮೇಲೆ ಆಸಿಡ್ ಎರಚಿದ ಮುಖ್ಯಶಿಕ್ಷಕ ಅಮಾನತು

By: Ommnews

Date:

Share post:

ಚಿತ್ರದುರ್ಗ: ವಿದ್ಯಾರ್ಥಿನಿ ಮೇಲೆ ಆಸಿಡ್ ಎರಚಿದ ಆರೋಪದ ಮೇಲೆ ಶಾಲೆಯ ಮುಖ್ಯಶಿಕ್ಷಕನ್ನು ಡಿಡಿಪಿಐ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

Advertisement
Advertisement
Advertisement

ಜೋಡಿಚಿಕ್ಕೇನಹಳ್ಳಿಯ ಸರ್ಕಾರಿ ಪ್ರಾಥಾಮಿಕ ಶಾಲೆಯಲ್ಲಿ ಅ.25 ರಂದು ಶಾಲಾ ಶೌಚಾಲಯ ಸ್ವಚ್ಛಗೊಳಿಸಲು ವಿದ್ಯಾರ್ಥಿಗಳನ್ನು ಬಳಸಿಕೊಂಡಿದ್ದರು. ಈ ವೇಳೆ 2ನೇ ತರಗತಿ ವಿದ್ಯಾರ್ಥಿನಿ ಒಬ್ಬಳ ಮೇಲೆ ಮುಖ್ಯಶಿಕ್ಷಕ ರಂಗಸ್ವಾಮಿ ಆಸಿಡ್ ಎರಚಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಈ ಘಟನೆಯಿಂದಾಗಿ ಬಾಲಕಿಯ ಬೆನ್ನಿಗೆ ಗಾಯವಾಗಿದ್ದು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾಳೆ.

ಈ ಸಂಬಂಧ ಪೋಷಕರು ಹಾಗೂ ಗ್ರಾಮಸ್ಥರು ಮುಖ್ಯ ಶಿಕ್ಷಕನ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಇದರ ಬೆನ್ನಲ್ಲೇ ಎಚ್ಚೆತ್ತ ಡಿಡಿಪಿಐ ರವಿಶಂಕರ್ ರೆಡ್ಡಿಯವರು ಮುಖ್ಯಶಿಕ್ಷಕನನ್ನು ಅಮಾನತುಗೊಳಿಸಿದ್ದಾರೆ.

ಈ ಸಂಬಂಧ ಶಾಲೆಯ ಮುಖ್ಯಶಿಕ್ಷಕ ರಂಗಸ್ವಾಮಿ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.

Share post:

LEAVE A REPLY

Please enter your comment!
Please enter your name here