ಪುತ್ತೂರು : ಇದೇ ಮೊದಲ ಬಾರಿಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 25 ಮತ್ತು 26ರಂದು ‘ಬೆಂಗಳೂರು ಕಂಬಳ – ನಮ್ಮ ಕಂಬಳ ‘ ಶೀರ್ಷಿಕೆಯಡಿ ಕಂಬಳ ನಡೆಯಲಿದೆ.
ಕಂಬಳ ಸಮಿತಿಯ ಅಧ್ಯಕ್ಷ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈಯವರ ನೇತೃತ್ವದಲ್ಲಿ, ಕಂಬಳಕ್ಕೆ ಸಹಕಾರ ನೀಡಿ ಸರಕಾರದಿಂದ ಅನುದಾನ ಬಿಡುಗಡೆಗೊಳಿಸಲು ಸಚಿವರಾದ ಶಿವರಾಜ್ ತಂಗಡಿಯವರಲ್ಲಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳಾದ ಮುರಳೀಧರ್ ರೈ ಮಠಂತಬೆಟ್ಟು ಮತ್ತು ಮನೀಶ್ ಉಪ್ಪಿನಂಗಡಿ ಉಪಸ್ಥಿತರಿದ್ದರು.