ಮಂಗಳೂರು : ಮುಂಗಾರು ಮಳೆ ಕೈಕೊಟ್ಟ ಬೆನ್ನಲ್ಲೇ ಇದೀಗ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹಮೂನ್ ಚಂಡಮಾರುತದ ಪರಿಣಾಮವಾಗಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿದ್ದ ತೇಜ್ ಚಂಡಮಾರುತಕ್ಕಿಂತಲೂ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹಮೂನ್ ಚಂಡಮಾರುತದ ಪರಿಣಾಮದಿಂದ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣಕನ್ನಡದಲ್ಲಿ ಅಕ್ಟೋಬರ್ 29 ರಿಂದ ನವೆಂಬರ್ 1 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಭಾನುವಾರದಿಂದ ಈ ಎರಡೂ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.