ಚೀನಾ: ಚೀನಾದ ಹ್ಯಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಗೇಮ್ಸ್ನ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಉತ್ತರಪ್ರದೇಶ ಐಎಎಸ್ ಕೇಡರ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಕನ್ನಡಿಗ ಸುಹಾಸ್ ಎಲ್ ವೈ ಅವರು ಚಿನ್ನದ ಪದಕ ಗೆದ್ದಿದ್ದಾರೆ.
ಪುರುಷರ ಸಿಂಗಲ್ಸ್ ಎಸ್‌ಎಲ್-4 ವಿಭಾಗದ ಫೈನಲ್ ಪಂದ್ಯದಲ್ಲಿ ಸುಹಾಸ್, ಮಲೇಷ್ಯಾದ ಮೊಹಮ್ಮದ್ ಅಮೀನ್ ಅವರನ್ನು 2-1 ಅಂತರದಿಂದ ಸೋಲಿಸಿದ್ದಾರೆ.