ರೋಜ್ ಗಾರ್ ಮೇಳದಲ್ಲಿ 50 ಸಾವಿರಕ್ಕೂ ಹೆಚ್ಚು ಮಂದಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ

By: Ommnews

Date:

Share post:

ನವದೆಹಲಿ: ಸರ್ಕಾರಿ ವಲಯದ ಉದ್ಯೋಗಕ್ಕೆ ಹೊಸದಾಗಿ ಸೇರ್ಪಡೆಗೊಂಡ 51 ಸಾವಿರಕ್ಕೂ ಹೆಚ್ಚು ಮಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ವೀಡಿಯೋ ಕಾನ್ಫರೆನ್ಸ್ ಮೂಲಕ ನೇಮಕಾತಿ ಪತ್ರಗಳನ್ನು ವಿತರಿಸಿದರು.

Advertisement
Advertisement
Advertisement

ದೇಶಾದ್ಯಂತ 37 ಸ್ಥಳಗಳಲ್ಲಿ ರೋಜ್‌ಗಾರ್ ಮೇಳ ನಡೆದಿದೆ. ನೇಮಕಾತಿ ಪತ್ರಗಳನ್ನು ವಿತರಿಸಿದ ಮಾತನಾಡಿದ ಪ್ರಧಾನಿ ಮೋದಿ ಅವರು, ಕಳೆದ ವರ್ಷ ಅಕ್ಟೋಬರ್‌ನಲ್ಲಿ ರೋಜ್‌ಗಾರ್ ಮೇಳವನ್ನು ಪ್ರಾರಂಭಿಸಲಾಯಿತು. ಕೇಂದ್ರ ಸರ್ಕಾರ, ಎನ್‌ಡಿಎ, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ‘ರೋಜ್‌ಗಾರ್ ಮೇಳ’ ಆಯೋಜಿಸಲಾಗುತ್ತಿದೆ. ಇದುವರೆಗೆ ಲಕ್ಷಾಂತರ ಯುವಕರಿಗೆ ಸರ್ಕಾರಿ ಉದ್ಯೋಗಕ್ಕೆ ನೇಮಕಾತಿ ಪತ್ರ ನೀಡಲಾಗಿದೆ.

ಇಂದು 50,000 ಕ್ಕೂ ಹೆಚ್ಚು ಯುವಕರಿಗೆ ಸರ್ಕಾರಿ ಉದ್ಯೋಗ ನೀಡಲಾಗಿದೆ. ದೀಪಾವಳಿಗೆ ಸ್ವಲ್ಪ ಸಮಯವಿದೆ, ಆದರೆ ಈ ಸಂದರ್ಭವು ನೇಮಕಾತಿ ಪತ್ರಗಳನ್ನು ಸ್ವೀಕರಿಸುವ 50,000 ಮಂದಿಯ ಕುಟುಂಬಗಳಿಗೆ ದೀಪಾವಳಿಗಿಂತ ಕಡಿಮೆಯೇನಲ್ಲ ಎಂದು ಬಣ್ಣಿಸಿದರು.

ದೇಶದ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಆಯೋಜಿಸಿರುವ ‘ರೋಜ್‌ಗಾರ್ ಮೇಳ’ ನಮ್ಮ ಯುವಜನತೆಯ ಬದ್ಧತೆಗೆ ಸಾಕ್ಷಿಯಾಗಿದೆ. ನಮ್ಮ ಸರ್ಕಾರ ಯುವಜನರ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಮಿಷನ್ ಮೋಡ್‌ನಲ್ಲಿ ಕೆಲಸ ಮಾಡುತ್ತಿದೆ. ನಾವು ಉದ್ಯೋಗ ನೀಡುವುದು ಮಾತ್ರವಲ್ಲದೆ ಇಡೀ ವ್ಯವಸ್ಥೆಯನ್ನು ಪಾರದರ್ಶಕಗೊಳಿಸುತ್ತಿದ್ದೇವೆ. ಇದು ಉದ್ಯೋಗ ಪ್ರಕ್ರಿಯೆಯಲ್ಲಿ ಜನರ ನಂಬಿಕೆಯನ್ನು ಹೆಚ್ಚಿಸಿದೆ ಎಂದು ಮೋದಿ ಹೇಳಿದರು.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section