ನವದೆಹಲಿ: ಸರ್ಕಾರಿ ವಲಯದ ಉದ್ಯೋಗಕ್ಕೆ ಹೊಸದಾಗಿ ಸೇರ್ಪಡೆಗೊಂಡ 51 ಸಾವಿರಕ್ಕೂ ಹೆಚ್ಚು ಮಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ವೀಡಿಯೋ ಕಾನ್ಫರೆನ್ಸ್ ಮೂಲಕ ನೇಮಕಾತಿ ಪತ್ರಗಳನ್ನು ವಿತರಿಸಿದರು.
ದೇಶಾದ್ಯಂತ 37 ಸ್ಥಳಗಳಲ್ಲಿ ರೋಜ್‌ಗಾರ್ ಮೇಳ ನಡೆದಿದೆ. ನೇಮಕಾತಿ ಪತ್ರಗಳನ್ನು ವಿತರಿಸಿದ ಮಾತನಾಡಿದ ಪ್ರಧಾನಿ ಮೋದಿ ಅವರು, ಕಳೆದ ವರ್ಷ ಅಕ್ಟೋಬರ್‌ನಲ್ಲಿ ರೋಜ್‌ಗಾರ್ ಮೇಳವನ್ನು ಪ್ರಾರಂಭಿಸಲಾಯಿತು. ಕೇಂದ್ರ ಸರ್ಕಾರ, ಎನ್‌ಡಿಎ, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ‘ರೋಜ್‌ಗಾರ್ ಮೇಳ’ ಆಯೋಜಿಸಲಾಗುತ್ತಿದೆ. ಇದುವರೆಗೆ ಲಕ್ಷಾಂತರ ಯುವಕರಿಗೆ ಸರ್ಕಾರಿ ಉದ್ಯೋಗಕ್ಕೆ ನೇಮಕಾತಿ ಪತ್ರ ನೀಡಲಾಗಿದೆ.
ಇಂದು 50,000 ಕ್ಕೂ ಹೆಚ್ಚು ಯುವಕರಿಗೆ ಸರ್ಕಾರಿ ಉದ್ಯೋಗ ನೀಡಲಾಗಿದೆ. ದೀಪಾವಳಿಗೆ ಸ್ವಲ್ಪ ಸಮಯವಿದೆ, ಆದರೆ ಈ ಸಂದರ್ಭವು ನೇಮಕಾತಿ ಪತ್ರಗಳನ್ನು ಸ್ವೀಕರಿಸುವ 50,000 ಮಂದಿಯ ಕುಟುಂಬಗಳಿಗೆ ದೀಪಾವಳಿಗಿಂತ ಕಡಿಮೆಯೇನಲ್ಲ ಎಂದು ಬಣ್ಣಿಸಿದರು.
ದೇಶದ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಆಯೋಜಿಸಿರುವ ‘ರೋಜ್‌ಗಾರ್ ಮೇಳ’ ನಮ್ಮ ಯುವಜನತೆಯ ಬದ್ಧತೆಗೆ ಸಾಕ್ಷಿಯಾಗಿದೆ. ನಮ್ಮ ಸರ್ಕಾರ ಯುವಜನರ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಮಿಷನ್ ಮೋಡ್‌ನಲ್ಲಿ ಕೆಲಸ ಮಾಡುತ್ತಿದೆ. ನಾವು ಉದ್ಯೋಗ ನೀಡುವುದು ಮಾತ್ರವಲ್ಲದೆ ಇಡೀ ವ್ಯವಸ್ಥೆಯನ್ನು ಪಾರದರ್ಶಕಗೊಳಿಸುತ್ತಿದ್ದೇವೆ. ಇದು ಉದ್ಯೋಗ ಪ್ರಕ್ರಿಯೆಯಲ್ಲಿ ಜನರ ನಂಬಿಕೆಯನ್ನು ಹೆಚ್ಚಿಸಿದೆ ಎಂದು ಮೋದಿ ಹೇಳಿದರು.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…