ಕರಾವಳಿ

ಕುಚ್ಚಲಕ್ಕಿ ಬೆಲೆಯಲ್ಲಿ ಭಾರಿ ಏರಿಕೆ

ಮಂಗಳೂರು: ಕುಚ್ಚಲಕ್ಕಿ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕೆ.ಜಿ.ಗೆ 15ರಿಂದ 20 ರೂ. ಹೆಚ್ಚಳವಾಗಿ 48 ರಿಂದ 50 ರೂ. ನಲ್ಲಿ ಮಾರಾಟವಾಗುತ್ತಿರುವ ಹಿನ್ನಲೆಯಲ್ಲಿ ಕರಾವಳಿಯ ಜನತೆ ಕಂಗಾಲಾಗಿದ್ದಾರೆ.

ಕುಚ್ಚಲಕ್ಕಿ ಬೆಲೆ ಹೆಚ್ಚಳವಾದರೂ, ಭತ್ತದ ಬೆಲೆ ಕೆ.ಜಿ.ಗೆ 2-3 ರೂ. ಮಾತ್ರ ಏರಿಕೆಯಾಗಿದೆ ಎಂದು ರೈತರು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನು ಖಾಸಗಿ ಮಿಲ್‌ಗ‌ಳಲ್ಲಿ ಸ್ಥಳೀಯ ಭತ್ತಕ್ಕೆ ಕ್ವಿಂಟಾಲ್‌ಗೆ 2,500-2,600 ರೂ. ಇದೆ. ಕಟಾವು ಚುರುಕುಗೊಂಡ ತಕ್ಷಣ ಬೆಲೆ ಇಳಿಮುಖವಾಗುವ ಭೀತಿಯೂ ಎದುರಾಗಿದೆ.

ಕರಾವಳಿ ಸೇರಿದಂತೆ ಮಲೆನಾಡು, ಬಯಲುಸೀಮೆ ಭಾಗದಲ್ಲೂ ಕಾರ್ಮಿಕರ ಕೊರತೆ, ಬೆಲೆಯ ಅಸ್ಥಿರತೆ ಇತ್ಯಾದಿ ಕಾರಣಕ್ಕೆ ಭತ್ತದ ಬೇಸಾಯ ಕುಸಿತ ಕಂಡಿದ್ದು, ಇದರಿಂದಾಗಿ ಕುಚ್ಚಲಕ್ಕಿ ಬೆಲೆ ಏರಿಕೆಯಾಗಿದೆ. ಆದರೆ ಮಧ್ಯವರ್ತಿಗಳು ಭತ್ತದ ಬೆಳೆಯನ್ನು ಏರದಂತೆ ತಡೆಯುತ್ತಿದ್ದಾರೆ ಎಂದು ರೈತರು ಆರೋಪವನ್ನು ಮಾಡುತ್ತಿದ್ದಾರೆ.

ಭತ್ತ ಹಾಗೂ ಅಕ್ಕಿ ನಡುವಿನ ಬೆಲೆ ವ್ಯತ್ಯಾಸವನ್ನು ಸರಿಪಡಿಸಿ ರೈತರಿಗೆ ನ್ಯಾಯ ಒದಗಿಸಲು ಸರಕಾರ ಮಧ್ಯಪ್ರವೇಶಿಸಿ ಕೂಡಲೇ ಭತ್ತಕ್ಕೆ ಹೆಚ್ಚಿನ ಬೆಂಬಲ ಬೆಲೆ ನಿಗದಿಪಡಿಸಬೇಕು. ಅದಕ್ಕಿಂತ ಕಡಿಮೆ ಬೆಲೆಯಲ್ಲಿ ಭತ್ತ ಖರೀದಿಸದಂತೆ ಖಾಸಗಿಯವರಿಗೆ ಕಡಿವಾಣ ಹಾಕುವ ವ್ಯವಸ್ಥೆ ಜಾರಿಯಾಗಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago