ಕರಾವಳಿ

ಹೆದ್ದಾರಿ ಅಗಲೀಕರಣದ ಕಾಮಗಾರಿ ವೇಳೆ ನೀರಿನ ಪೈಪ್‌ ಗಳಿಗೆ ಹಾನಿ: ಕಾಮಗಾರಿಗೆ ತಡೆಯೊಡ್ಡಿದ ಸ್ಥಳೀಯರು

ಉಪ್ಪಿನಂಗಡಿ: ಉಪ್ಪಿನಂಗಡಿಯ ಕುಡಿಯುವ ನೀರು ಶುದ್ಧೀಕರಣ ಘಟಕದಿಂದ ಹಲವೆಡೆಗೆ ಸರಬರಾಜಾಗುವ ನೀರಿನ ಪೈಪು ಗಳು ಹೆದ್ದಾರಿ ಅಗಲೀಕರಣದ ಕಾಮಗಾರಿಯ ವೇಳೆ ಹಾನಿಗೊಳಿಸಿದ ಕಾರಣಕ್ಕೆ ಕಳೆದ ನಾಲ್ಕು ದಿನಗಳಿಂದ ನೀರಿಲ್ಲದೆ ಸಂಕಷ್ಟಗೀಡಾದ ಮಂದಿ ಶನಿವಾರ ಆಕ್ರೋಶಗೊಂಡು ಕಾಮಗಾರಿಗೆ ತಡೆಯೊಡ್ಡಿದ ಘಟನೆ ನಡೆದಿದೆ.

Advertisement
Advertisement
Advertisement

ಇದನ್ನು ಸರಿಪಡಿಸಬೇಕೆಂದು ಪಂಚಾಯತ್‌ ಆಡಳಿತವು ಕಾಮಗಾರಿ ನಿರತ ಸಂಸ್ಥೆಯ ಅಧಿಕಾರಿಗಳನ್ನು ಒತ್ತಾಯಿಸಿತ್ತು. ಸ್ಪಂದಿಸುವ ಭರವಸೆ ನೀಡಿದ್ದರೂ ಆಬಳಿಕ ಮೌನ ವಹಿಸಿದ್ದರು. ಇದರಿಂದಾಗಿ ಸತತ ನಾಲ್ಕು ದಿನ ನೀರಿಲ್ಲದೆ ಉಪ್ಪಿನಂಗಡಿ ಪೇಟೆಯ ಜನತೆ ಸಮಸ್ಯೆಗೀಡಾದರು.

ಈ ನಡುವೆ ಶನಿವಾರ ಸ್ಥಳೀಯರು ನೀರಿನ ಪೈಪುಗಳನ್ನು ಸರಿಪಡಿಸದೆ ಕಾಮಗಾರಿ ಮುಂದುವರಿಸಲು ಅವಕಾಶ ನೀಡಬಾರದೆಂದು ಒತ್ತಾಯಿಸಿದರು. ಸ್ಥಳಕ್ಕಾಗಮಿಸಿದ ಪಂಚಾಯತ್‌ ಉಪಾಧ್ಯಕ್ಷೆ ವಿದ್ಯಾಲಕ್ಷ್ಮೀ ಪ್ರಭು ಪಂಚಾಯತ್‌ ಸದಸ್ಯ ಅಬ್ದುಲ್‌ ರಹಿಮಾನ್‌ ನೀರಿನ ಪೈಪುಗಳನ್ನು ಆದ್ಯತೆಯ ಮೇರೆಗೆ ಸರಿಪಡಿಸಿಕೊಡಬೇಕೆಂದು ಒತ್ತಾಯಿಸಿದರು.

ಮಾತ್ರವಲ್ಲದೇ ಜಿ.ಪಂ. ಸಿಇಒ ಅವರಿಗೆ ಸಮಸ್ಯೆಯ ತೀವ್ರತೆಯನ್ನು ತಿಳಿಸಲಾಯಿತು. ಆಬಳಿಕ ಎಚ್ಚೆತ್ತ ಜಿಲ್ಲಾಡಳಿತ ಸಂಬಂಧಿತ ಸಂಸ್ಥೆಯ ಅಧಿಕಾರಿಗಳಿಗೆ ಸೂಚನೆ ನೀಡಿತು. ಅದರಂತೆ ಸಮಸ್ಯೆಗೆ ಪರಿಹಾರ ಒದಗಿಸಬೇಕೆಂದು ತಾಕೀತು ಮಾಡಿತು. ಅದರಂತೆ ಸ್ಥಳಕ್ಕೆ ಭೇಟಿ ನೀಡಿದ ಕೆಎನ್‌ಆರ್‌ ಸಂಸ್ಥೆಯ ಅಧಿಕಾರಿಗಳು ಹಾನಿಗೀಡಾದ ಪೈಪುಗಳನ್ನು ರವಿವಾರದೊಳಗೆ ಸರಿಪಡಿಸುವ ಭರವಸೆ ನೀಡಿದರು.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago