ಪುತ್ತೂರು: ಮಂಗಳೂರಿನ ಉದಯ ಎಂಬವನು ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ.
ಕಿರುಕುಳ ನೀಡಿದ ವಿಚಾರವನ್ನು ಆಕೆ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ತಿಳಿಸಿದ್ದು, ಪ್ರಯಾಣಿಕರು ಆತನನ್ನು ಇಳಿಯಲು ಬಿಡದೆ ತಡೆದಿದ್ದರು. ಬಳಿಕ ಬಸ್ ಅನ್ನು ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಬಳಿಗೆ ತಂದು ನಿಲ್ಲಿಸಲಾಯಿತು. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡು ಪೋಕ್ಸೋ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.