ಪುತ್ತೂರು : ಮಂಗಳೂರಿನ ಯುನಿಟಿ ಆಸ್ಪತ್ರೆಯಲ್ಲಿ ಮೂರನೇ ಹೆರಿಗೆ ಸಂದರ್ಭದಲ್ಲಿ ಮಾಡಾವು ನಿವಾಸಿಯಾಗಿರುವ ಮುಹಮ್ಮದ್ ರಫೀಕ್ ರವರ ಪತ್ನಿ ಮರಿಯಮ್ ರಮೀಝಾ ಮೃತಪಟ್ಟಿದ್ದಾರೆ.
ಮೃತಪಟ್ಟ ಮಹಿಳೆಯನ್ನು ಸಮಸ್ತ ಕೇರಳ ಇಸ್ಲಾಮಿಕ್ ಮತ ವಿದ್ಯಾಭ್ಯಾಸ ಬೋರ್ಡ್ ಇದರ ಸದಸ್ಯರಾದ ಪರ್ಲಡ್ಕ ಅಬ್ದುಲ್ ರಶೀದ್ ಹಾಜಿಯವರ ಪುತ್ರಿ ಎಂದು ಗುರುತಿಸಲಾಗಿದೆ.
ಹೆರಿಗೆಯ ಬಳಿಕ ತೀವ್ರ ರಕ್ತಸ್ರಾವದಿಂದಾಗಿ ರಮೀಝಾ ಮೃತಪಟ್ಟಿದ್ದು ಮಗು ಆರೋಗ್ಯವಾಗಿದೆ ಎಂದು ತಿಳಿದುಬಂದಿದೆ.
ಮೃತರು ಪತಿ, ಮೂರು ಮಕ್ಕಳನ್ನು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.