ನೇತ್ರಾವತಿ ನದಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ

0
100

ಮಂಗಳೂರು : ಚಿಕ್ಕಮಗಳೂರಿನ ಮುಗುಳಬಳ್ಳಿ ಗೋಕುಲ್ ಫಾರ್ಮ್ ನಿವಾಸಿ ಬಿ.ಎಸ್ ಶಂಕರಗೌಡ ಎಂಬವರ ಪುತ್ರ ಪ್ರಸನ್ನ (37) ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಧ್ಯಾಹ್ನ ವೇಳೆ ತೊಕ್ಕೊಟ್ಟು ಕಡೆಯಿಂದ ಬಂದು ರಾ.ಹೆ.66 ರ ಬಳಿ ಕಾರು ನಿಲ್ಲಿಸಿ ತಡೆಬೇಲಿಯ ಬದಿಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆಯನ್ನು ಪ್ರತ್ಯಕ್ಷ ಕಂಡವರು ತಕ್ಷಣ ರಕ್ಷಣೆಗೆ ಓಡಿದರೂ ಅದಾಗಲೇ ನೀರುಪಾಲಾಗಿದ್ದರು.

ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆಗೈದ ವ್ಯಕ್ತಿಗಾಗಿ ಶೋಧ ಕಾರ್ಯ ಆರಂಭಗೊಂಡಿದೆ.

LEAVE A REPLY

Please enter your comment!
Please enter your name here