ಮಂಗಳೂರು/ಉಡುಪಿ: ಬೆಳ್ಳಂಬೆಳಗ್ಗೆ ಇಲ್ಲಿನ ವಿವಿಧ ಆಭರಣ ಮಳಿಗೆಗಳ ಮೇಲೆ ಐಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಮಂಗಳೂರಿನ ಕದ್ರಿ ಬಳಿಯ ಶಿವಭಾಗ್‌ನ ಆಭರಣ ಮಳಿಗೆ ಮೇಲೆ ದಾಳಿ ನಡೆಸಿರುವ IT ಅಧಿಕಾರಿಗಳು ತೀವ್ರ ಶೋಧ ನಡೆಸಿದ್ದಾರೆ. ಐದಾರು ಮಂದಿ ಅಧಿಕಾರಿಗಳು ಬಿಲ್ಲಿಂಗ್ ವಿವರ, ಚಿನ್ನದ ವ್ಯಾಪಾರಕ್ಕೆ ಸಂಬಂಧಿಸಿದ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ.
ಇದೇ ವೇಳೆ ಉಡುಪಿ, ಕಾರ್ಕಳ, ಕುಂದಾಪುರ, ಪುತ್ತೂರು, ಪಡುಬಿದ್ರಿ, ಹೆಬ್ರಿ ಬ್ರಹ್ಮಾವರ ಸೇರಿದಂತೆ ಹಲವೆಡೆ ದಾಳಿ ನಡೆಸಿ ದಾಖಲೆ ಪರಿಶೀಲಿಸಿದ್ದಾರೆ.