ಪುತ್ತೂರು : ಬಡಗನ್ನೂರು ಗ್ರಾಮದ ಕೊಯ್ಲ ಎಂಬಲ್ಲಿರುವ ನವೀನ್ ಕುಮಾರ್ ರೈ ಅವರ ಹಳೆ ಮನೆಯ ಕೊಟ್ಟಿಗೆಯ ಅಟ್ಟದಲ್ಲಿ ಇಟ್ಟಿದ್ದ ಸುಮಾರು 23 ಗೋಣಿ ಅಡಿಕೆಯನ್ನು ಕಳವು ಮಾಡಲಾಗಿದ್ದು, ಈ ಕುರಿತು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಬಡಗನ್ನೂರಿನ ಕೊಯ್ಲ ಮನೆ ಶ್ರವಣ್ ಕೆ(20) , ಬಾಣಪದವು ಜಯಚಂದ್ರ (21), ನಿಡ್ಪಳ್ಳಿ ಡೊಬ್ಬಟ್ಟಗಿರಿಯ ಅಶೋಕ (24), ನಿಡ್ಪಳ್ಳಿ ಕಲ್ಲಮೂಲೆಯ ಪುನೀತ್ (20) ಎಂದು ಗುರುತಿಸಲಾಗಿದೆ.
ಬಂಧಿತರಿಂದ 1,55,925/ರೂ. ಮೌಲ್ಯದ ಅಡಿಕೆ ಕಳವು ಮಾಡಲು ಉಪಯೋಗಿಸಿದ ಸ್ವಿಪ್ಟ್ ಕಾರು, ಮತ್ತು ಆಟೋ ರಿಕ್ಷಾ ಸೇರಿದಂತೆ ಒಟ್ಟು 4,15,925/ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.