ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮಾಡಿದ ಸಿಎಂ

0
86

ಬೆಂಗಳೂರು : 68 ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ,ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾರೋಹಣ ಮಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ, ರಾಷ್ಟ್ರ ಧ್ವಜ ಹಾಗೂ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಬಳಿಕ ವಿವಿಧ ಕನ್ನಡ ನಾಡಿನ ಸಂಸ್ಕೃತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ರಾಜ್ಯಾದ್ಯಂತ ಹಲವು ಶಾಲೆಗಳ ಶಾಲಾ ಮಕ್ಕಳು ಪಾಲ್ಗೊಂಡಿದ್ದು, ಕನ್ನಡ ಗೀತೆಗಳಿಗೆ ನೃತ್ಯ ಮಾಡುವ ಮೂಲಕ ಪ್ರೇಕ್ಷಕರ ಗಮನ ಸೆಳೆದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಾಸಕರಾದ ರಿಜ್ವಾನ್ ಅರ್ಷದ್ ಮತ್ತು ಆರ್ ವಿ ದೇಶಪಾಂಡೆ ಅವರೊಂದಿಗೆ ಹಲವಾರು ಗಣ್ಯರು ಭಾಗಿಯಾಗಿದ್ದರು.

ಧ್ವಜಾರೋಹಣದ ನಂತರ ಸುಮಾರು 10,000 ಶಾಲಾ ಮಕ್ಕಳಿಂದ ಪಥಸಂಚಲನ ನಡೆಯಿತು.

LEAVE A REPLY

Please enter your comment!
Please enter your name here