8 ತಿಂಗಳು ಗರ್ಭಿಣಿಯಾಗಿದ್ದ ಮಲಯಾಳಂ ನಟಿ ಪ್ರಿಯಾ ಹೃದಯಾಘಾತದಿಂದ ಇಂದು ವಿಧಿವಶರಾಗಿದ್ದಾರೆ.
ವೈದ್ಯ ಪ್ರಿಯಾ ಅವರು ಹಲವು ಸೀರಿಯಲ್‌ಗಳಲ್ಲಿ ನಟಿಸಿದ್ದಾರೆ. ಮಲಯಾಳಂ ಕಿರುತೆರೆಯಲ್ಲಿ ಬೇಡಿಕೆಯ ನಟಿಯಾಗಿದ್ರು. ಮದುವೆಯ ಬಳಿಕ ನಟನೆಗೆ ಪ್ರಿಯಾ ಬ್ರೇಕ್ ನೀಡಿದ್ದರು. 35ನೇ ವಯಸ್ಸಿನ ಪ್ರಿಯಾ, 8 ತಿಂಗಳ ತುಂಬು ಗರ್ಭಿಣಿಯಾಗಿದ್ದರು.
ಎಂದಿನಂತೆ ಹೆಲ್ತ್ ಚೆಕಪ್‌ಗೆ ಖಾಸಗಿ ಆಸ್ಪತ್ರೆಗೆ ಹೋದಾಗ ನಟಿಗೆ ಹೃದಯಾಘಾತವಾಗಿದೆ. ನವಜಾತ ಶಿಶುಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದೀಗ ಪ್ರಿಯಾ ನಿಧನಕ್ಕೆ ಅನೇಕ ಕಿರುತೆರೆ ನಟ-ನಟಿಯರು ಕಂಬನಿ ಮಿಡಿದಿದ್ದಾರೆ.